ಗುರುವಾರ , ಮಾರ್ಚ್ 23, 2023
28 °C

ಪಡಿತರಚೀಟಿ: ಇ-ಕೆವೈಸಿ ಕಾರ್ಯ ಮತ್ತೆ ಪ್ರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಪಡಿತರ ಚೀಟಿಯಲ್ಲಿ ಹೆಸರಿರುವ ಎಲ್ಲ ಕುಟುಂಬದ ಸದಸ್ಯರೆಲ್ಲರೂ ನ್ಯಾಯಬೆಲೆ ಅಂಗಡಿಗೆ ಹೋಗಿ ಆಧಾರ್ ವಿವರ ದೃಢೀಕರಿಸುವ ಹಾಗೂ ಬಯೊಮೆಟ್ರಿಕ್ ನೀಡುವ ಕಾರ್ಯವನ್ನು ಆರಂಭಿಸಲಾಗಿದೆ.

ಪಡಿತರ ಚೀಟಿಯಲ್ಲಿ ಕುಟುಂಬದ ಹಿರಿಯ ಮಹಿಳೆಯನ್ನು ಕಡ್ಡಾಯವಾಗಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗುತ್ತಿದೆ. ಹಿರಿಯ ಮಹಿಳೆಗೆ ಕುಟುಂಬದ ಸದಸ್ಯರು ಆಗುವ ಸಂಬಂಧ ಸರಿಪಡಿಸುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಕುಟುಂಬದ ಒಬ್ಬ ಸದಸ್ಯರ ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಪಡಿತರ ಚೀಟಿಯಲ್ಲಿನ ಸದಸ್ಯರು ಗ್ಯಾಸ್ ಸಿಲಿಂಡರ್ ಹೊಂದಿರುವ ಮಾಹಿತಿ, ಪಡಿತರ ಚೀಟಿಯಲ್ಲಿನ ಸದಸ್ಯರು ಹೊಂದಿರುವ ಮೊಬೈಲ್ ಸಂಖ್ಯೆ ಹೊಂದಿರಬೇಕು.

ವಯೋವೃದ್ಧ, ಕುಷ್ಠ ರೋಗ ಮತ್ತು ಇತ್ಯಾದಿ ಕಾರಣಗಳಿಂದಾಗಿ ಬೆರಳಚ್ಚು ಹೊಂದಾಣಿಕೆ ಮಾಡಲು ಮತ್ತು ಬರಲು ಆಗದೇ ಇದ್ದಲ್ಲಿ ಮಾಹಿತಿ ನೀಡುವುದು, ಇ-ಕೆವೈಸಿ ಸಂಗ್ರಹಣೆಯ ಕಾರ್ಯ ಪ್ರತಿದಿನ ಬೆಳಿಗ್ಗೆ 7ರಿಂದ ರಾತ್ರಿ 8 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.

ಇ-ಕೆವೈಸಿ ಮಾಹಿತಿ ಸಂಗ್ರಹಣೆ ಮಾಡಲು ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿ ಮಾಡುತ್ತಿದೆ. ಪಡಿತರ ಚೀಟಿದಾರರು ಈ ಪ್ರಕ್ರಿಯೆಗೆ ಯಾವುದೇ ಹಣ ಸಂದಾಯ ಮಾಡಬಾರದು. ಇದು ಸಂಪೂರ್ಣ ಉಚಿತವಾಗಿದೆ.

ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ದಾಖಲಿಸದ
ಪಡಿತರ ಚೀಟಿಯಲ್ಲಿಯ ಸದಸ್ಯರಿಗೆ ಮುಂಬರುವ ದಿನಗಳಲ್ಲಿ ಪಡಿತರ ದೊರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು