ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಹಜ್ ಕಮಿಟಿಗೆ ಮಹಮ್ಮದ್ ರೌಫೊದ್ದಿನ್ ಅಧ್ಯಕ್ಷ

ಫಾಲೋ ಮಾಡಿ
Comments

ಬೀದರ್: ಇಲ್ಲಿಯ ಬಿಜೆಪಿ ಹಿರಿಯ ಮುಖಂಡಮಹಮ್ಮದ್ ರೌಫೊದ್ದಿನ್ ಕಚೇರಿವಾಲೆ ಅವರನ್ನು ಸರ್ಕಾರ ರಾಜ್ಯ ಹಜ್ ಕಮಿಟಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಕಚೇರಿವಾಲೆ ಅವರು ಬಿಜೆಪಿಯ ವಿವಿಧ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಪಕ್ಷದ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದಾರೆ.

ಪ್ರಸ್ತುತ ಪಕ್ಷದ ಅಲ್ಪಸಂಖ್ಯಾತರ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ಅವರಿಗೆ ರಾಜ್ಯ ಹಜ್ ಕಮಿಟಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

ಸಂಸದರ ಸಂತಸ: ರೌಫೊದ್ದಿನ್ ಕಚೇರಿವಾಲೆ ಅವರನ್ನು ರಾಜ್ಯ ಹಜ್ ಕಮಿಟಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ಸಂಸದ ಭಗವಂತ ಖೂಬಾ ಸಂತಸ ವ್ಯಕ್ತಪಡಿಸಿದ್ದಾರೆ.

ಕಚೇರಿವಾಲೆ ಅವರ ಪಕ್ಷ ನಿಷ್ಠೆಗೆ ರಾಜ್ಯ ಹಜ್ ಕಮಿಟಿ ಅಧ್ಯಕ್ಷ ಹುದ್ದೆ ಒಲಿದಿದೆ. ಇದು, ಬಿಜೆಪಿ ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ, ಅವರಿಗೆ ಒಳ್ಳೆಯ ಸ್ಥಾನಕೊಡುವ ಪಕ್ಷ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ಕಚೇರಿವಾಲೆ ಹಜ್ ಕಮಿಟಿ ಮೂಲಕ ಉತ್ತಮ ಕೆಲಸ ಮಾಡಲಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ಅವರಿಗೆ ವಿವಿಧ ಸೌಲಭ್ಯ ಒದಗಿಸಿಕೊಡಲು ಶ್ರಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT