ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಸಮಸ್ಯೆ ಪರಿಹಾರಕ್ಕೆ ಸಿದ್ಧ

ಸ್ಟೂಡೆಂಟ್ ಪೊಲೀಸ್ ಕೆಡೆಟ್ ಸಮಾರೋಪ: ಪಿಎಸ್‍ಐ ಯಶೋದಾ ಹೇಳಿಕೆ
Last Updated 25 ಮಾರ್ಚ್ 2023, 12:38 IST
ಅಕ್ಷರ ಗಾತ್ರ

ಜನವಾಡ: ಮಕ್ಕಳ ಏನೇ ಸಮಸ್ಯೆಗಳಿದ್ದರೂ ಪರಿಹರಿಸಲು ಪೊಲೀಸ್ ಇಲಾಖೆ ಸಿದ್ಧವಿದೆ ಎಂದು ಬೀದರ್‍ನ ನ್ಯೂಟೌನ್ ಠಾಣೆ ಪಿಎಸ್‍ಐ ಯಶೋದಾ ಕಟಕೆ ಹೇಳಿದರು.

ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ. ಮಕ್ಕಳಿಗೆ ಪೊಲೀಸ್ ಇಲಾಖೆ ಬಗ್ಗೆ ತಿಳಿವಳಿಕೆ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಡತನ ಸಾಧನೆಗೆ ತೊಡಕಾಗುವುದಿಲ್ಲ. ಪರಿಶ್ರಮ ವಹಿಸಿದರೆ ಜೀವನದಲ್ಲಿ ಯಾವುದೂ ಅಸಾಧ್ಯ ಅಲ್ಲ ಎಂದು ನುಡಿದರು.
ಮಕ್ಕಳು ಒಳ್ಳೆಯ ನಡೆ, ನುಡಿ, ಶಿಸ್ತು, ಸಂಯಮ, ಸಮಯ ಪ್ರಜ್ಞೆ ಹಾಗೂ ಪರೋಪಕಾರ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಮುಖ್ಯಶಿಕ್ಷಕ ವೆಂಕಟರಾವ್ ಸಿಂಧೆ ಮಾತನಾಡಿ, ಸ್ಟೂಡೆಂಟ್ ಪೊಲೀಸ್ ಕೆಡೆಟ್ ಕಾರ್ಯಕ್ರಮ ಮಕ್ಕಳಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಅರಿತುಕೊಳ್ಳಲು ನೆರವಾಗಿದೆ ಎಂದು ಹೇಳಿದರು.
ಚಿತ್ರಕಲಾ ಶಿಕ್ಷಕ ಅಶೋಕ ಸಿಂಧೆ, ದೈಹಿಕ ಶಿಕ್ಷಣ ಶಿಕ್ಷಕಿ ಸಂಗೀತಾ ಹಾಗೂ ಕನ್ನಡ ಶಿಕ್ಷಕಿ ಶ್ರೀದೇವಿ ವಿ. ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಎಎಸ್‍ಐಗಳಾದ ಅಶೋಕ, ಸುಭಾಷ್, ಪೊಲೀಸ್ ಕಾನ್‍ಸ್ಟೆಬಲ್ ಸಿದ್ರಾಮ ಕುಂಬಾರ, ಶಿಕ್ಷಕರಾದ ಭೀಮರಾವ್, ಸುನಿತಾ ಕುಲಕರ್ಣಿ, ನಿರ್ಮಲಾ ಪಾಟೀಲ, ಜಗದೇವಿ ಸಾವಳೆ, ಶ್ಯಾಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT