ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಗೋಶಾಲೆಗಳ ಅನುದಾನಕ್ಕೆ ಶಿಫಾರಸು

ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ನಿರ್ಧಾರ
Last Updated 29 ಜನವರಿ 2021, 15:24 IST
ಅಕ್ಷರ ಗಾತ್ರ

ಬೀದರ್‌: ರಾಮಕೃಷ್ಣ ವಿವೇಕಾನಂದ ಆಶ್ರಮ ಗೋಶಾಲೆ, ಪಿಂಜರಾಪೋಳ ಗೋಶಾಲೆ ಸೇರಿ ಒಟ್ಟು ನಾಲ್ಕು ಗೋಶಾಲೆಗಳಿಗೆ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಶಿಫಾರಸು ಮಾಡಲು ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅಧ್ಯಕ್ಷತೆಯಲ್ಲಿ ನಡೆದ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಕಾಯ್ದೆಯ ಅನುಷ್ಠಾನದಲ್ಲಿ ಪೋಲಿಸ್, ಸಾರಿಗೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿ ಕುರಿತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಜಿಲ್ಲೆಯಲ್ಲಿ 10 ಗೋಶಾಲೆಗಳಿವೆ. ಸುವರ್ಣ ಗೋತಳಿ ಸಂವರ್ಧನೆ, ಪಿಂಜಾರಾಪೋಲ ಇತರೆ ಗೋಶಾಲೆಗಳಿಗೆ ಮೂಲಸೌಕರ್ಯಕ್ಕಾಗಿ ಅನುದಾನ ಕೊಡಲಾಗಿದೆ. ಅನುದಾನ ಪಡೆಯದ ಗೋಶಾಲೆಗಳಿಗೆ ನಾಲ್ಕು ತಿಂಗಳ ನಿರ್ವಹಣಾ ವೆಚ್ಚವನ್ನು ಅನುದಾನವಾಗಿ ಕೊಡಲು ಸಭೆಯಲ್ಲಿ ನಿರ್ಧರಿಸಲಾಗಿತು.

ಬೀದರ್‌ನ ರಾಮಕೃಷ್ಣ ವಿವೇಕಾನಂದ ಆಶ್ರಮ ಗೋಶಾಲೆಯಲ್ಲಿ 70 ಜಾನುವಾರುಗಳಿವೆ. ಪಿಂಜರಾಪೋಳ ಹಾಗೂ ಇತರೆ ಗೋಶಾಲೆಗಳಿಗೆ ಅನುದಾನದ ಒದಗಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

‘ರೈತರು ಜಾನುವಾರುಗಳನ್ನು ಕೃಷಿ ಚಟುವಟಿಕೆಗೆ ಹಾಗೂ ಮಾರಾಟ ಮಾಡಲು ಅಭ್ಯಂತರವಿಲ್ಲ. ಆದರೆ, ಸಾಗಣೆ ಸಮಯದಲ್ಲಿ ಜಾನುವಾರುಗಳಿಗೆ ವಾಹನದಲ್ಲಿ ನಿಗದಿತ ಪ್ರಮಾಣದಲ್ಲಿ ಸ್ಥಳವಕಾಶ ಇರಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಹೊಸ ಕಾಯ್ದೆ ಅನ್ವಯ ಹಸು, ಕರು, ಹೋರಿ ಎತ್ತು ಮತ್ತು 13 ವರ್ಷದೊಳಗಿನ ಎಮ್ಮೆ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಜನಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಮಲ್ಲಿಕಾರ್ಜುನ ಹಂಚಿನಾಳ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಗೌತಮ ಅರಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ, ಪ್ರಾಣಿದಯಾ ಸಂಘದ ಪದಾಧಿಕಾರಿ ರಮೇಶ ದೇವಕತೆ, ಗೋಶಾಲೆಗಳ ಪ್ರತಿನಿಧಿಗಳು ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT