ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ‘ಕೃಷಿ ಈಶ್ವರ’ ಕೃತಿ ಬಿಡುಗಡೆ

Last Updated 5 ಅಕ್ಟೋಬರ್ 2022, 13:06 IST
ಅಕ್ಷರ ಗಾತ್ರ

ಬೀದರ್: ನಿವೃತ್ತ ಪ್ರಾಚಾರ್ಯೆ ಪ್ರೊ. ಲೀಲಾವತಿ ಚಾಕೋತೆ ಹಾಗೂ ಪ್ರಶಾಂತ ಜಿ. ವಡಗೇರೆ ಸಂಪಾದಿತ ‘ಕೃಷಿ ಈಶ್ವರ’ ಕೃತಿಯನ್ನು ಇಲ್ಲಿನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಲೋಕಾರ್ಪಣೆಗೊಳಿಸಿದರು.

ಈಶ್ವರಪ್ಪ ಚಾಕೋತೆ ಅವರು ವಿಷಮುಕ್ತ ಆಹಾರ ಉತ್ಪಾದನೆಗಾಗಿ ಸಾವಯವ ಕೃಷಿ ಜಾಗೃತಿ ಮೂಡಿಸಿದ್ದನ್ನು ಅವರು ಸ್ಮರಿಸಿದರು.

ನವದೆಹಲಿಯ ಕೃಷಿ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಎಸ್.ಎ. ಪಾಟೀಲ ಮಾತನಾಡಿದರು.ಭಾಲ್ಕಿಯ ಡಾ. ಬಸವಲಿಂಗ ಪಟ್ಟದ್ದೇವರು, ಹುಲಸೂರಿನ ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಗೌರವಾಧ್ಯಕ್ಷೆ ಗುರಮ್ಮ ಸಿದ್ದಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.

ಪಶು ವೈದ್ಯಕೀಯ ಕಾಲೇಜು ಡೀನ್ ಡಾ. ದಿಲೀಪಕುಮಾರ, ತೋಟಗಾರಿಕೆ ಕಾಲೇಜು ಡೀನ್ ಡಾ. ಎಸ್.ವಿ. ಪಟೀಲ, ಡಾ. ವೈಜಿನಾಥ ಚಾಕೋತೆ, ಕಸಾಪ ಜಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಮುಖಂಡರಾದ ಬಸವರಾಜ ಬುಳ್ಳಾ, ವೈಜಿನಾಥ ಕಮಠಾಣೆ, ಕೆ.ವಿ.ಕೆ. ನಿವೃತ್ತ ಮುಖ್ಯಸ್ಥ ಡಾ. ರವಿ ದೇಶಮುಖ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ. ಕೃಷ್ಣಪ್ಪ, ಎಫ್‍ಪಿಎಐ ಬೀದರ್ ಶಾಖೆ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಇದ್ದರು.

ಸಂಗಪ್ಪ ಹಿಪ್ಪಳಗಾಂವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವಿದ ವೈಜಿನಾಥ ಸಜ್ಜನಶೆಟ್ಟಿ ರೈತ ಗೀತೆ ಹಾಡಿದರು.

ಕೆ.ಎಚ್. ಚಳಕಾಪುರೆ ನಿರೂಪಿಸಿದರು. ಡಾ. ಸವಿತಾ ಚಾಕೋತೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT