ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಿ: ಬಿ.ಎಸ್.ಯಡಿಯೂರಪ್ಪ ಆಗ್ರಹ

7

ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಿ: ಬಿ.ಎಸ್.ಯಡಿಯೂರಪ್ಪ ಆಗ್ರಹ

Published:
Updated:

ಬೀದರ್: ‘ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ಹದಗೆಟ್ಟಿದ್ದು, ತಕ್ಷಣ ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು.

ನಗರದ ಸ್ವಾಮಿ ಸಮರ್ಥ ಕಲ್ಯಾಣ ಮಂಟಪದಲ್ಲಿ ಗುರುವಾರ ಬಿಜೆಪಿ ಶಕ್ತಿಕೇಂದ್ರದ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ. ಫಲಾನುಭವಿಗಳಿಗೆ ವೃದ್ಧಾಪ್ಯ ಹಾಗೂ ಅಂಗವಿಕಲರ ಮಾಸಾಶನ ದೊರೆಯುತ್ತಿಲ್ಲ. ಹಾಲು ಉತ್ಪಾದನೆ ಕಡಿಮೆಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನತೆಗೆ ಇದೆ’ ಎಂದು ತಿಳಿಸಿದರು.

‘ಸಹಕಾರ ಬ್ಯಾಂಕ್‌ಗಳಿಂದ ರೈತರು ಪಡೆದಿರುವ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯ ಸರ್ಕಾರದ ರೈತರ ಸಾಲಮನ್ನಾ ಘೋಷಣೆ ಸ್ಪಷ್ಟವಾಗಿಲ್ಲ’ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !