ಜನವಾಡ: ಉತ್ತಮ ಸಂಸ್ಕಾರದಿಂದ ಧರ್ಮ ರಕ್ಷಣೆ ಸಾಧ್ಯವಿದೆ ಎಂದು ಹಳ್ಳಿಖೇಡದ ಸಿದ್ಧರಾಮ ದೇವರು ನುಡಿದರು.
ಬೀದರ್ ತಾಲ್ಲೂಕಿನ ಸೋಲಪುರ ಗ್ರಾಮದ ವೀರಭದ್ರೇಶ್ವರ ಮಂದಿರದಲ್ಲಿ ನಡೆದ ಧರ್ಮಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ನಾವು ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ. ದಯವೇ ಧರ್ಮದ ಮೂಲವಾಗಿದೆ ಎಂದು ತಿಳಿಸಿದರು.
ಮುಖಂಡ ಜಗನ್ನಾಥ ಕರಂಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಅಖಿಲ ಭಾರತೀಯ ವೀರಶೈವ ಮಹಾಸಭೆ ಬೆಂಗಳೂರು ಮಹಾನಗರ ಯುವ ವೇದಿಕೆಯ ಉಪಾಧ್ಯಕ್ಷ ಕಾರ್ತಿಕ ಮಠಪತಿ, ಬಿಜೆಪಿ ಕಲಬುರ್ಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಮಾತನಾಡಿದರು.
ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ ಕಾರ್ಯಕ್ರಮ ಉದ್ಘಾಟಿಸಿದರು. ದಾನಿಗಳಾದ ಅಮೃತರಾವ್ ದೇಶಮುಖ ಹಾಗೂ ಪಿತಾಂಬರರಾವ್ ದೇಶಮುಖ ದಂಪತಿಯನ್ನು ಸನ್ಮಾನಿಸಲಾಯಿತು.
ಪ್ರಮುಖರಾದ ರಾಜಶೇಖರ ನಾಗಮೂರ್ತಿ, ಭೀಮರಾವ್ ಮಾಲಿಪಾಟೀಲ, ಗಣಪತಿ ಪಾಟೀಲ, ಸಿದ್ದಪ್ಪ ಖೇಳಗೆ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮಂದಿರದಲ್ಲಿ ವೀರಭದ್ರೇಶ್ವರ, ನಂದಿ ಬಸವೇಶ್ವರರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಮಹಾ ಮಂಗಳಾರತಿ ಜರುಗಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.