ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಳಾದ ರಸ್ತೆ, ಸೇತುವೆ ದುರಸ್ತಿಪಡಿಸಿ: ಅಧಿಕಾರಿಗಳಿಗೆ ಸಚಿವ ಸೂಚನೆ

Last Updated 11 ಜುಲೈ 2021, 16:40 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ರಸ್ತೆ ಹಾಗೂ ಸೇತುವೆಗಳು ಹಾಳಾಗಿವೆ. ತಕ್ಷಣ ದುರಸ್ತಿ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಲವು ಕಡೆಗಳಲ್ಲಿ ರಸ್ತೆ ಮೇಲೆ ಮಳೆ ನೀರು ನಿಂತು ರಸ್ತೆಯೇ ಕಾಣದಂತಹ ಸ್ಥಿತಿಯಿದೆ. ರಸ್ತೆಗಳ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಸ್ತೆಗಳಲ್ಲಿ ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಅಲ್ಲಲ್ಲಿ ಕಾಲುವೆಗಳು ಒಡೆದು ರೈತರ ಹೊಲಕ್ಕೆ ನೀರು ನುಗ್ಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್, ಸಣ್ಣ ನೀರಾವರಿ, ಪಿಎಂಜಿಎಸ್‍ವೈ ಮತ್ತಿತರ ಇಲಾಖೆಗಳ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ಹಾಗೂ ಕಿರಿಯ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಕಾಲುವೆ ಹಾಗೂ ಸೇತುವೆಗಳನ್ನು ಪರಿಶೀಲಿಸಬೇಕು. ಸಮಸ್ಯೆ ಕಾಣಿಸಿದಲ್ಲಿ ತಕ್ಷಣ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಗಾಳಿ-ಮಳೆಯಿಂದಾಗಿ ಕೆಲವೆಡೆ ವಿದ್ಯುತ್ ತಂತಿಗಳ ಮೇಲೆ ಗಿಡಗಳು ಉರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಜನತೆ ದೂರು ನೀಡುತ್ತಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಅಂತಹ ಕಡೆಗಳಿಗೆ ಭೇಟಿ ನೀಡಿ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು. ಅನೇಕ ಗ್ರಾಮಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಹಾಳಾಗಿವೆ. ತಕ್ಷಣ ಕೆಟ್ಟಿರುವ ಟ್ರಾನ್ಸ್‌ಫಾರ್ಮರ್‌ ದುರಸ್ತಿಗೊಳಿಸಿ ರೈತರಿಗೆ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೆಲವೆಡೆ ಕಬ್ಬು ಹಾಗೂ ಮತ್ತಿತರ ಬೆಳೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ತಕ್ಷಣ ಸಮೀಕ್ಷೆ ನಡೆಸ ಬೇಕು ಎಂದು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT