ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Last Updated 26 ಜನವರಿ 2022, 12:12 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಪ್ರತಾಪನಗರದ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.


ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.

1950 ರ ಜನವರಿ 26 ರಂದು ಸಂವಿಧಾನ ಜಾರಿಗೆ ಬಂದು ಭಾರತ ಗಣರಾಜ್ಯವಾಯಿತು. ಅದರ ಪ್ರಯುಕ್ತ ಈ ದಿನ ಪ್ರತಿ ವರ್ಷ ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಕಚೇರಿ ಅಧೀಕ್ಷಕ ರಮೇಶ ಗೋಖಲೆ, ಪ್ರಥಮ ದರ್ಜೆ ಸಹಾಯಕಿ ಮಹಾದೇವಿ, ದ್ವಿತೀಯ ದರ್ಜೆ ಸಹಾಯಕರಾದ ರತನ್‍ಸಿಂಗ್, ಅಂಬಾದಾಸ, ಬೆರಳಚ್ಚುಗಾರ್ತಿ ಅನಿತಾ, ಹಣಮಂತ, ಸ್ವಾಮಿದಾಸ ಇದ್ದರು.


ಕಾಂಗ್ರೆಸ್ ಕಚೇರಿ:ಗಣರಾಜ್ಯೋತ್ಸವ

ಬೀದರ್: ನಗರದ ಶಿವನಗರದಲ್ಲಿನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ 73ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಿತು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಶಾಸಕ ರಹೀಂಖಾನ್, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಕರ್ನಾಟಕ ದಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ರೋಹಿದಾಸ್ ಘೋಡೆ, ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಶರಣಪ್ಪ ಬಲ್ಲೂರ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ವಕ್ತಾರ ರಾಜಶೇಖರ ಪಾಟೀಲ ಅಷ್ಟೂರ, ಇತರ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ, ಮುಖಂಡರಾದ ಶಿವರಾಜ ಹಾಸನಕರ್, ನಿಸಾರ್ ಅಹಮ್ಮದ್, ಅಬ್ದುಲ್ ಮನ್ನಾನ್ ಸೇಠ್, ಸಂಜಯ ಜಾಗೀರದಾರ್, ಡಿ.ಕೆ. ಸಂಜುಕುಮಾರ, ಅಝರ್ ರೆಹಾನ್, ಶರಣಪ್ಪ ಶರ್ಮಾ, ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಧನರಾಜ ಹಂಗರಗಿ, ಖದೀರ್, ಮೆಹಮೂದ್ ಖಾನ್, ಸನ್ಮುಕಪ್ಪ ಪಸರಗಿ, ಶ್ರೀನಿವಾಸ ರೆಡ್ಡಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT