ಗಣರಾಜ್ಯೋತ್ಸವ: ಬೀದರ್‌ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಧ್ವಜಾರೋಹಣ

ಬೀದರ್: ಜಿಲ್ಲಾಡಳಿತದಿಂದ ಇಲ್ಲಿಯ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಧ್ವಜಾರೋಹಣ ನೆರವೇರಿಸಿದರು.
ಶಾಸಕ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಪೊಲೀಷ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಕೀರ್ತನಾ ಇದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರಾಯಚೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರಿಂದ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡಿದರು. ನಂತರ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಬೀದರ್ನ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಧ್ವಜಾರೋಹಣ ನೆರವೇರಿಸಿ ಮಾತನಾಡಿದರು#Bidar #RepublicDay2022 pic.twitter.com/CHkc7dWDCK
— Prajavani (@prajavani) January 26, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.