ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್-ಪುಣೆ ವಿಮಾನ ಸೇವೆಗೆ ಮನವಿ

Last Updated 1 ಸೆಪ್ಟೆಂಬರ್ 2021, 13:54 IST
ಅಕ್ಷರ ಗಾತ್ರ

ಬೀದರ್: ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಬೀದರ್-ಪುಣೆ ನಡುವೆ ನಾಗರಿಕ ವಿಮಾನ ಸೇವೆ ಆರಂಭಿಸಬೇಕು ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿ ಬೀದರ್‌ನಿಂದ ಪುಣೆಗೆ ತೆರಳಬೇಕಾದರೆ ಕನಿಷ್ಠ 10 ತಾಸುಗಳು ಬೇಕಾಗುತ್ತವೆ. ಹೀಗಾಗಿ ವಿಮಾನ ಸೇವೆ ಶುರು ಮಾಡಿದರೆ ಜಿಲ್ಲೆಯ ವ್ಯಾಪಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.

ಕೇಂದ್ರ ವಾರ್ತಾ, ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ, ಖೇಲೋ ಇಂಡಿಯಾ ಅಡಿಯಲ್ಲಿ ಬೀದರ್ ಜಿಲ್ಲೆಯಲ್ಲಿ ಹೊಸ ಕ್ರೀಡಾಂಗಣ ನಿರ್ಮಿಸಬೇಕು ಎಂದು ಬೇಡಿಕೆ ಮಂಡಿಸಿದರು.

ಬೀದರ್‌ನಲ್ಲಿ ಎಫ್‍ಎಂ ರೆಡಿಯೊ ಹಾಗೂ ಆಕಾಶವಾಣಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದು ಕೋರಿದರು.

ಇಬ್ಬರೂ ಸಚಿವರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೇಡಿಕೆಗಳ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಭಗವಂತ ಖೂಬಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT