ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಶ್ಚಿಯನ್ ಹಕ್ಕುಗಳ ಸಮಿತಿ ಮೆರವಣಿಗೆ

ಘೋಷಿತ ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ ಅನುದಾನಕ್ಕೆ ಆಗ್ರಹ
Last Updated 7 ಡಿಸೆಂಬರ್ 2020, 15:48 IST
ಅಕ್ಷರ ಗಾತ್ರ

ಬೀದರ್: ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಘೋಷಿಸಲಾದ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಿ, ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಕ್ರಿಶ್ಚಿಯನ್ ಹಕ್ಕುಗಳ ಸಮಿತಿಯ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಸಮ್ಮಿಶ್ರ ಸರ್ಕಾರ ತನ್ನ ಬಜೆಟ್‍ನಲ್ಲಿ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಿಸಿ, ₹ 200 ಕೋಟಿ ಅನುದಾನ ಮೀಸಲಿಟ್ಟಿತ್ತು. ಆದರೆ, ಮುಖ್ಯಮಂತ್ರಿ ಏಕಾಏಕಿ ಅದನ್ನು ರದ್ದುಪಡಿಸಿರುವುದು ಅನ್ಯಾಯವಾಗಿದೆ. ಕೂಡಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಬಡ ಕ್ರೈಸ್ತರಿಗೆ ಶಾದಿಭಾಗ್ಯ ಯೋಜನೆ ಪುನಃ ಆರಂಭಿಸಬೇಕು. ಕ್ರೈಸ್ತರಿಗೆ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಕ್ರಿಶ್ಚಿಯನ್ ಹಕ್ಕುಗಳ ಸಮಿತಿಯ ಅಧ್ಯಕ್ಷ ಅನಿಲ್ ಎಂ. ಜಾಧವ, ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಎ. ಕೌಠಾ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಆನಂದ, ಮುಖಂಡರಾದ ಸಂಜಯ ಜಾಗೀರದಾರ್, ಇ. ಕುಮಾರ್ ಕೊಡ್ಡೆಕರ್, ಶಾಮರಾವ್ ಬಂಬಳಗಿ, ಅಮರ ಭಾಂಗೆ, ಶಾಲಿನಿ, ಜಾನ್ ವೆಸ್ಲಿ, ಅನಿಲ್ ನಿಡೋದಾ, ಜಾರ್ಜ್ ನೇಳಗೆ, ವಸಂತ ಚಿದ್ರಿ ಮೊದಲಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT