ಸೋಮವಾರ, ಜನವರಿ 17, 2022
21 °C

ಬೀದರ್: ಮಿನಿ ವಿಧಾನಸೌಧ ನಿರ್ಮಾಣಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾ ಕೇಂದ್ರವಾದ ನಗರದಲ್ಲಿ ಶೀಘ್ರ ಮಿನಿ ವಿಧಾನಸೌಧ ನಿರ್ಮಿಸಬೇಕು ಎಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹಿಸಿದೆ.

ಸೇನೆ ಪದಾಧಿಕಾರಿಗಳು ನಗರದಲ್ಲಿ ನಿಯೋಗದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಮನವಿಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಮಿನಿ ವಿಧಾನಸೌಧಕ್ಕೆ ಸರ್ಕಾರ 2010ರಲ್ಲೇ ಅನುದಾನ ಒದಗಿಸಿದರೂ ಕಾಮಗಾರಿ ಆರಂಭಿಸಿಲ್ಲ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸೇನೆ ಸಂಸ್ಥಾಪಕ ಅಧ್ಯಕ್ಷ ಸ್ವಾಮಿದಾಸ ಕೆಂಪೆನೋರ, ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪೊಲೀಸ್ ಪಾಟೀಲ, ಉಪಾಧ್ಯಕ್ಷ ಸಂಗಮೇಶ ಏಣಕೂರ, ಎಂ.ಡಿ. ಮಸ್ತಾನ್ ಮುಲ್ಲಾ ನಿಯೋಗದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.