ಶುಕ್ರವಾರ, ಮೇ 14, 2021
27 °C

ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹ; ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಮೂರು ರೈತ ವಿರೋಧಿ ಕೃಷಿ ಕಾಯ್ದೆ ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ ಹಾಗೂ ಅಖಿಲ ಭಾರತ ಟ್ರೇಡ್ ಯುನಿಯನ್ ಕಾಂಗ್ರೆಸ್ (ಎಐಟಿಯುಸಿ) ಒತ್ತಾಯಿಸಿವೆ.

ಎರಡೂ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರಧಾನಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರೈತರು ನಾಲ್ಕು ತಿಂಗಳಿಂದ ಚಳವಳಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ರೈತರ ಬೇಡಿಕೆಗಳನ್ನು ಮನ್ನಿಸುತ್ತಿಲ್ಲ. ಸರ್ಕಾರದ ಬೆಂಬಲಿಗರು ಅಪಮಾನಕರ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

29 ಕಾರ್ಮಿಕರ ಕಾಯ್ದೆಗಳನ್ನು ರದ್ದುಪಡಿಸಿ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ, ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಕಾರ್ಖಾನೆಗಳಿಗೆ ಕಬ್ಬು ಪೂರೈಸಿದವರಿಗೆ 15 ದಿನಗಳ ಒಳಗೆ ಹಣ ಪಾವತಿಸುತ್ತಿಲ್ಲ ಎಂದು ದೂರಿದರು.

ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ವಿದ್ಯುತ್ ವಿತರಣೆ ಖಾಸಗೀಕರಣ ಮಸೂದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಬಾಬುರಾವ್ ಹೊನ್ನಾ, ಜಿಲ್ಲಾ ಘಟಕದ ಅಧ್ಯಕ್ಷ ನಜೀರ್ ಅಹಮ್ಮದ್, ಅಖಿಲ ಭಾರತ ಜಂಜೀಮೆ ಇನ್ಸಾಫ್ ಜಿಲ್ಲಾ ಘಟಕದ ಅಧ್ಯಕ್ಷ ಅಲಿ ಅಹಮ್ಮದ್ ಖಾನ್, ಖಮರ್ ಪಟೇಲ್, ರಾಮಯ್ಯ ಮಠಪತಿ, ಶಿವರಾಜಿರಾವ್ ಪಾಟೀಲ ವಾಗ್ಲೆ, ಶೇಖ ನವಾಜ್, ಗುರುಪಾದಯ್ಯ ಸ್ವಾಮಿ, ಚಂದ್ರಭಾನ, ಪ್ರಭು ತಗಣಿಕರ್, ಎಂ.ಡಿ. ಷಫಾಯತ್ ಅಲಿ, ಖಾದರ್ ಸಾಬ್, ಬಸವರಾಜ ಪಾಟೀಲ, ನನ್ನೆ ಸಾಬ್ ಮೊದಲಾದವರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.