ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕಾಯ್ದೆಗಳ ತಿದ್ದುಪಡಿ ಹಿಂಪಡೆಯಲು ಆಗ್ರಹ
Last Updated 19 ಸೆಪ್ಟೆಂಬರ್ 2020, 15:53 IST
ಅಕ್ಷರ ಗಾತ್ರ

ಬೀದರ್: ಕರ್ನಾಟಕ ಭೂ ಸುಧಾರಣೆ ಕಾಯ್ದೆ ಹಾಗೂ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಿಪಿಐ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಸಲ್ಲಿಸಿದರು.

ವಿದ್ಯುತ್, ರೈಲ್ವೆ ಖಾಸಗೀಕರಣ ಕೈಬಿಡಬೇಕು. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ ರೂ. 10 ಸಾವಿರ ಗೌರವ ಧನ ಕೊಡಬೇಕು. ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು. ಮಳೆಯಿಂದ ಉದ್ದು, ಹೆಸರು ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ರೂ. 30 ಸಾವಿರ ಪರಿಹಾರ ಕಲ್ಪಿಸಬೇಕು. ಕಾಡು ಹಂದಿ ಹಾಗೂ ಜಿಂಕೆಗಳಿಂದ ಆದ ಬೆಳೆ ಹಾನಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಘಟಕದ ಅಧ್ಯಕ್ಷ ನಜೀರ್ ಅಹಮ್ಮದ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಡಿ. ಖಮರ್ ಪಟೇಲ್, ಎಐಟಿಐ ಜಿಲ್ಲಾ ಘಟಕದ ಅಧ್ಯಕ್ಷ ಅಲಿ ಅಹಮ್ಮದ್ ಖಾನ್, ಮಾಣಿಕ ಖಾನಾಪುರಕರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT