ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರಿಗೆ ಪ್ಯಾಕೇಜ್‍ಗೆ ಆಗ್ರಹ

Last Updated 1 ಆಗಸ್ಟ್ 2020, 15:19 IST
ಅಕ್ಷರ ಗಾತ್ರ

ಬೀದರ್: ಕೋವಿಡ್ ಸೋಂಕಿನ ಪ್ರಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಜಿಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಆಗ್ರಹಿಸಿದೆ.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಸಲ್ಲಿಸಿದರು.

ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಬಾರದು. ಪದವಿಪೂರ್ವ ಶಿಕ್ಷಣ ಇಲಾಖೆ ನೇಮಕಾತಿಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರಾತಿನಿಧ್ಯ ಕಲ್ಪಿಸಬೇಕು. ಗೌರವ ಧನ ಹೆಚ್ಚಿಸಬೇಕು. ವರ್ಷದ ಎಲ್ಲ 12 ತಿಂಗಳು ಗೌರವ ಧನ ಕೊಡಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ಕೂಡಲೇ ಪರಿಹಾರ ಒದಗಿಸಬೇಕು. ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯದಲ್ಲಿ ಮೌಲ್ಯಮಾಪಕರನ್ನಾಗಿ ಪರಿಗಣಿಸಬೇಕು. ಸೇವಾ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ನೀಡಬೇಕು. ಇಪಿಎಫ್, ಇಎಸ್‍ಐ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಪ್ರೊ. ಅಲ್ಲಮಪ್ರಭು ಬೆಟ್ಟದೂರ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೌತಮ ಕಸ್ತೂರೆ, ಉಪಾಧ್ಯಕ್ಷ ಉತ್ತಮ ದಂಡೆ ಹಾಗೂ ಕಾರ್ಯದರ್ಶಿ ಪರಮೇಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT