ಗುರುವಾರ , ಡಿಸೆಂಬರ್ 3, 2020
20 °C

ಜಿಲ್ಲೆಯಲ್ಲಿ ಎರಡು ವಿಶ್ವವಿದ್ಯಾಲಯ ಸ್ಥಾಪಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯಲ್ಲಿ ಒಂದು ಸಾಮಾನ್ಯ ಹಾಗೂ ಇನ್ನೊಂದು ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ಸಂಸದ ಭಗವಂತ ಖೂಬಾ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರಿಗೆ ಮನವಿ ಮಾಡಿದ್ದಾರೆ.

ಬೀದರ್ ಜಿಲ್ಲೆ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಯ ವಿದ್ಯಾರ್ಥಿಗಳು
ಬೆಂಗಳೂರು, ಹುಬ್ಬಳಿ, ಧಾರವಾಡ ನಗರಗಳಿಗೆ ಹೋಗುತ್ತಿದ್ದಾರೆ. ಗಡಿ ಗ್ರಾಮಗಳ ವಿದ್ಯಾರ್ಥಿಗಳು ಮಹಾರಾಷ್ಟ್ರದ ಸೋಲಾಪುರ ಹಾಗೂ ತೆಲಂಗಾಣದ ಹೈದರಾಬಾದ್‌ಗೆ ವಲಸೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬೀದರ್‌ನಲ್ಲಿಯೇ ವಿಶ್ವವಿದ್ಯಾಲಯ ಆರಂಭವಾದರೆ ಎಲ್ಲ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.