ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಕರವೇ ಕಾರ್ಯಕರ್ತರ ಬಿಡುಗಡೆಗೆ ಮನವಿ

Published 31 ಡಿಸೆಂಬರ್ 2023, 15:22 IST
Last Updated 31 ಡಿಸೆಂಬರ್ 2023, 15:22 IST
ಅಕ್ಷರ ಗಾತ್ರ

ಬೀದರ್: ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳಕರ್ ನೇತೃತ್ವದಲ್ಲಿ ಪದಾಧಿಕಾರಿಗಳು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.

ನಂತರ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮಾತನಾಡಿ, ರಾಜ್ಯದಲ್ಲಿ ಅಂಗಡಿ ಮುಂಗಟ್ಟು ಸೇರಿದಂತೆ ಎಲ್ಲ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ವೇಳೆ ಸುಳ್ಳು ಪ್ರಕರಣ ದಾಖಲಿಸಿ, ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಅಂಗಡಿಗಳ ಮೇಲೆ ಕನ್ನಡ ನಾಮಫಲಕಕ್ಕಾಗಿ ವೇದಿಕೆ ಮೂರು ತಿಂಗಳಿಂದ ಜನಜಾಗೃತಿ ಅಭಿಯಾನ ನಡೆಸುತ್ತ ಬಂದಿದೆ. ಆದರೂ ನಾಮಫಲಕ ಅಳವಡಿಕೆಯನ್ನು ಕಡೆಗಣಿಸಲಾಗಿತ್ತು. ಹೀಗಾಗಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ. ನಾರಾಯಣಗೌಡ ಹಾಗೂ ಕಾರ್ಯಕರ್ತರ ಬಿಡುಗಡೆಗೆ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

ವೇದಿಕೆಯ ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಸುನಿಲ್ ಬೇಲೂರೆ, ಬೀದರ್ ತಾಲ್ಲೂಕು ಯುವ ಘಟಕದ ಅಧ್ಯಕ್ಷ ವಿನಾಯಕರೆಡ್ಡಿ ಬುಧೇರಾ, ಉದಯಕುಮಾರ ಅಷ್ಟೂರೆ, ಸೋಮಶೇಖರ ಸಜ್ಜನ, ದತ್ತಾತ್ರಿ ಅಲ್ಲಮಕೇರೆ, ಸತೀಶ ಫುಲಾರಿ, ವಿವೇಕ ನಿರ್ಮಳೆ, ನವೀನ್ ಬುಧೇರಾ, ಅಮಿತ್ ಶಿವಪೂಜೆ ಪಾಲ್ಗೊಂಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT