ಪರಿಶಿಷ್ಟ ಜಾತಿ ಉಪ ಯೋಜನೆ ಕಾಯ್ದೆಗೆ ಆಗ್ರಹ

7

ಪರಿಶಿಷ್ಟ ಜಾತಿ ಉಪ ಯೋಜನೆ ಕಾಯ್ದೆಗೆ ಆಗ್ರಹ

Published:
Updated:
Deccan Herald

ಬೀದರ್: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ 25 ರಷ್ಟು ಅನುದಾನ ಮೀಸಲಿಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪ ಯೋಜನೆ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಳುಹಿಸಿದರು.

ಶಿಕ್ಷಣ, ಆರೋಗ್ಯ, ಭೂಮಿಯನ್ನು ರಾಷ್ಟ್ರೀಕರಣ ಮಾಡಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕೊಡಬೇಕು. ಸಂವಿಧಾನದ ಪ್ರತಿಗಳನ್ನು ಹರಿದು ಹಾಕಿದ ಮನುವಾದಿ ಶ್ರೀನಿವಾಸ ಪಾಂಡೆ ಅವರ ವಿರುದ್ಧ ದೇಶದ ದ್ರೋಹ ಪ್ರಕರಣ ದಾಖಲಿಸಬೇಕು ಎಂದು
ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯದಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಎಸ್‌ಸಿ, ಎಸ್‌ಟಿ ನೌಕರರ ಜೇಷ್ಠತೆ ವಿಸ್ತರಿಸುವ ಕಾಯ್ದೆ-2017 ಅನ್ನು ಜಾರಿಗೊಳಿಸಬೇಕು. ಸಮಾನ ಶಿಕ್ಷಣ ನೀತಿ ರೂಪಿಸಲು ಶಿಕ್ಷಣ ತಜ್ಞರನ್ನು ಒಳಗೊಂಡ ಆಯೋಗ ರಚಿಸಬೇಕು. ಸರ್ಕಾರಿ ಹುದ್ದೆಗಳಿಗೆ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ನೇಮಕಾತಿ ಮಾಡಿಕೊಳ್ಳಬೇಕು. ಅನುಸೂಚಿತ ಜಾತಿ/ಪಂಗಡಗಳ ಉಪ ಯೋಜನೆ ಕಾಯ್ದೆ 2013 ರ ಕಲಂ 7 ಡಿಗೆ ತಿದ್ದುಪಡಿ ಮಾಡಿ ಅನುಸೂಚಿತ ಜಾತಿ/ ಪಂಗಡಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದಕ್ಕೆ ಬಳಸದಿರಲು ಕ್ರಮ ಕೈಗೊಳ್ಳಬೇಕು. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವೈಜ್ಞಾನಿಕ ವರದಿಯನ್ನು ಅನುಮೋದಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಎಲ್ಲರಿಗೂ ಉಚಿತ ಆರೋಗ್ಯ ಸೇವೆ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸಮಿತಿಯ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ಜಿಲ್ಲಾ ಘಟಕದ ಅಧ್ಯಕ್ಷ ರಘುನಾಥ ಗಾಯಕವಾಡ, ಸಂಘಟನಾ ಕಾರ್ಯದರ್ಶಿ ಪವನ ಗುನ್ನಳ್ಳಿಕರ್, ತಾಲ್ಲೂಕು ಘಟಕದ ಅಧ್ಯಕ್ಷ ರಾಜಕುಮಾರ ಭಾವಿಕಟ್ಟಿ ಭಾಗವಹಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !