ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಜೆಟ್‌ನಲ್ಲಿ ಬಸವಕಲ್ಯಾಣ ಅಭಿವೃದ್ಧಿಗೆ ₹ 100 ಕೋಟಿ ಮೀಸಲಿಡಿ’

Published 9 ಫೆಬ್ರುವರಿ 2024, 16:09 IST
Last Updated 9 ಫೆಬ್ರುವರಿ 2024, 16:09 IST
ಅಕ್ಷರ ಗಾತ್ರ

ಬಸವಕಲ್ಯಾಣ: `ಬಸವಾದಿ ಶರಣರು ಕಾರ್ಯಗೈದ ಈ ನಗರವನ್ನು ಅಂತರರಾಷ್ಟ್ರೀಯ ಪ್ರವಾಸಿ ಕೇಂದ್ರವಾಗಿಸುವುದಕ್ಕಾಗಿ ಪೂರಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಅಗತ್ಯವಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ₹ 100 ಕೋಟಿ ಅನುದಾನ ಮೀಸಲಿಡಬೇಕು' ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲ್ಲೂಕು ಘಟಕದ ಅಧ್ಯಕ್ಷ ಶಶಿಕಾಂತ ದುರ್ಗೆ ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಮನವಿಪತ್ರ ಕಳುಹಿಸಿದ್ದಾರೆ. `ನಗರದಲ್ಲಿ ಹೊರ ವರ್ತುಲ ರಸ್ತೆ, ಮುಖ್ಯ ರಸ್ತೆಯಿಂದ ಅನುಭವ ಮಂಟಪದವರೆಗೆ ಚತುಷ್ಪಥ ರಸ್ತೆ ನಿರ್ಮಿಸಬೇಕಾಗಿದೆ. ನಗರದಲ್ಲಿನ ರಸ್ತೆಗಳನ್ನು ಅಗಲಗೊಳಿಸಿ ಎಲ್ಲ ಶರಣ ಸ್ಮಾರಕಗಳ ಹತ್ತಿರದಲ್ಲಿ ವಿವಿಧ ಸೌಲಭ್ಯ ದೊರಕಿಸಿ ಕೊಡಬೇಕಾದ ಅಗತ್ಯವಿದೆ' ಎಂದಿದ್ದಾರೆ.

`ರೂ.620 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಕೆಲಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರು ಈಚೆಗೆ ಮಧ್ಯಸ್ಥಿಕೆ ವಹಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರೂ. 50 ಕೋಟಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ವೇಗ ಪಡೆದುಕೊಳ್ಳುವಂತೆ ಮಾಡಿದಕ್ಕೆ ಸಂತಸವಾಗಿದೆ. ಇದಕ್ಕಾಗಿ ಸಚಿವರು ಮತ್ತು ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಲಾಗುವುದು' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT