ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಂವಿಧಾನಕ್ಕೆ ಗೌರವ ಕೊಡಿ’

ಸಂವಿಧಾನ ಜಾಗೃತಿ ಜಾಥಾಗೆ ಭವ್ಯ ಸ್ವಾಗತ
Published 15 ಫೆಬ್ರುವರಿ 2024, 16:09 IST
Last Updated 15 ಫೆಬ್ರುವರಿ 2024, 16:09 IST
ಅಕ್ಷರ ಗಾತ್ರ

ಹುಮನಾಬಾದ್: ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಗುರುವಾರ ಸಂವಿಧಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಅಂಬಮ್ಮಾ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಸಂವಿಧಾನ ಜಾಗೃತಿ ಜಾಥಾವೂ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಸಲಾಯಿತು. ವಿವಿಧ ಶಾಲೆಯ ವಿದ್ಯಾರ್ಥಿಗಳು ನೃತ್ಯ , ಕೋಲಾಟ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಅಂಜುಂ ತಬಸುಮ್ , ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಿಂಗರಾಜ್ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗೂಡಾಳ್, ಪಿಎಸ್ಐ ಬಸವರಾಜ, ಪಿಡಿಒ ಶಿವರಾಜ ಸೇರಿದಂತೆ ಇತರರು ಇದ್ದರು.

ನಂದಗಾಂವ : ತಾಲ್ಲೂಕಿನ ನಂದಗಾಂವ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಸದಸ್ಯರಿಂದ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಲಾಯಿತು. ನಂತರ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಪೀಠಕ್ಕೆ ಪಠಣ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಂದ್ರ ರಾಂಪೂರೆ, ಪಿಡಿಒ ನಾಗಯ್ಯ ಸೇರಿದಂತೆ ಇತರರು ಇದ್ದರು.

ಮದರಗಾಂವ : ತಾಲ್ಲೂಕಿನ ಮದರಗಾಂವ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತಿಸಲಾಯಿತು. ನಂತರ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು.

ಸೀತಾಳಗೇರಾ : ಸೀತಾಳಗೇರಾ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷ , ಪಿಡಿಒ ಸೇರಿದಂತೆ ಇತರರು ಇದ್ದರು.

ಡಾಕುಳಗಿ : ತಾಲ್ಲೂಕಿನ ಡಾಕುಳಗಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತಿಸಲಾಯಿತು. ನಂತರ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ ಮಾತನಾಡಿ, ಸಂವಿಧಾನದ ಬಗ್ಗೆ ಪ್ರತಿಯೊಬ್ಬ ಭಾರತೀಯರಿಗೂ ಗೌರವ ಇರಬೇಕು. ಸಂವಿಧಾನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಅಷ್ಟೇ ಅಲ್ಲ ಭಾರತ ದೇಶದ 130ಕೋಟಿ ಜನರ ಸಂವಿಧಾನ ಇದಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಬಿಯಾ ಬೇಗಂ , ಉಪಾಧ್ಯಕ್ಷ ಸುಭಾಷ್, ಪಿಡಿಒ ಹನುಮಂತ ಸೇರಿದಂತೆ ಇತರರು ಇದ್ದರು.

ಹುಮನಾಬಾದ್ ತಾಲ್ಲೂಕಿನ ಡಾಕುಳಗಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಸ್ತಬ್ಧಚಿತ್ರವನ್ನು ಮಹಿಳೆಯರು ಸ್ವಾಗತಿಸಿದರು
ಹುಮನಾಬಾದ್ ತಾಲ್ಲೂಕಿನ ಡಾಕುಳಗಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಸ್ತಬ್ಧಚಿತ್ರವನ್ನು ಮಹಿಳೆಯರು ಸ್ವಾಗತಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT