ಶನಿವಾರ, ಮೇ 28, 2022
26 °C

ಕಂದಾಯ ದಿನಾಚರಣೆ: ನೌಕರರು ವೃತ್ತಿ ಪಾವಿತ್ರ್ಯತೆ ಕಾಪಾಡಿ- ಭುವನೇಶ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ನೌಕರರು ವೃತ್ತಿ ಪಾವಿತ್ರ್ಯತೆ ಕಾಪಾಡಿಕೊಂಡು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯ ಎಂದು ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ ಹೇಳಿದರು.

ಪಟ್ಟಣದ ಪುರಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ಈಚೆಗೆ ಆಯೋಜಿಸಿದ್ದ ಕಂದಾಯ ದಿನಾಚರಣೆ ಸಮಾರಂಭ ಉದ್ಘಾಟಿಸಿ, ಅವರು ಮಾತನಾಡಿದರು.

‘ಕಂದಾಯ ಇಲಾಖೆ ಸಿಬ್ಬಂದಿಗೆ ರಜೆ ಅನ್ನುವುದೇ ಇರುವುದಿಲ್ಲ. ಕೃಷಿ, ತೋಟಗಾರಿಕೆ ಬೆಳೆ ಸಮೀಕ್ಷೆ ಕಾರ್ಯ ಸೇರಿ ಸರ್ಕಾರದ ವಿವಿಧ ಯೋಜನೆ ಜಾಗೃತಿ, ಅನುಷ್ಠಾನ ಮತ್ತಿತರ ಕೆಲಸಗಳ ಜವಾಬ್ದಾರಿ ಕಂದಾಯ ಇಲಾಖೆ ಮೇಲೆ ಇರುವುದರಿಂದ ಎಲ್ಲ ನೌಕರರು ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ತಾಲ್ಲೂಕಿನಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಕಂದಾಯ ಇಲಾಖೆ ನೌಕರರು ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ತಿಳಿಸಿದರು.

ಕಲಬುರ್ಗಿಯ ಮನೋವಿಜ್ಞಾನಿ ಡಾ.ವೆಂಕಟರೆಡ್ಡಿ ಉಪನ್ಯಾಸ ನೀಡಿದರು. ಡಿವೈಎಸ್ಪಿ ಡಾ.ದೇವರಾಜ ಬಿ., ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ ಮಾತನಾಡಿದರು.

ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಪ್ಪ ಪಾಟೀಲ, ಜಿಲ್ಲಾ ಲೆಕ್ಕಿಗರ ಸಂಘದ ಅಧ್ಯಕ್ಷ ಶಿವಾನಂದ ಪಾಟೀಲ, ತಾಲ್ಲೂಕು ಅಧ್ಯಕ್ಷ ಐಮದ್ ಮುಲ್ಲಾ, ಉಪ ತಹಶೀಲ್ದಾರ್‌ ಮಲ್ಲಿಕಾರ್ಜುನ ವಡ್ಡನಕೆರಿ, ದೀಲರಾಜ್ ಪಸರಗಿ ಇದ್ದರು.

ಶಿರಸ್ತೇದಾರ ಗೋಪಾಲ ಹಿಪ್ಪರಗಿ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು