ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್: ವಡಗಾಂವ್‍ನಲ್ಲಿ ಕಂದಾಯ ಸಚಿವ ವಾಸ್ತವ್ಯ

Last Updated 5 ಮೇ 2022, 2:53 IST
ಅಕ್ಷರ ಗಾತ್ರ

ಔರಾದ್: ಕಂದಾಯ ಸಚಿವ ಆರ್. ಅಶೋಕ ಅವರು ಮೇ 21ರಂದು ತಾಲ್ಲೂಕಿನ ವಡಗಾಂವ್ (ಡಿ)ದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅವರು ಬುಧವಾರ ಗ್ರಾಮದಲ್ಲಿ ಸಭೆ ಸಾರ್ವಜನಿಕರಿಂದ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ನಿಗದಿಯಾಗಿದೆ ಎಂದರು.

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎನ್ನುವುದು ಸರ್ಕಾರದ ಸಂಕಲ್ಪ. ಸಣ್ಣ ಪುಟ್ಟ ಕೆಲಸಗಳಿಗಾಗಿಜನರು ಕಚೇರಿಗಳಿಗೆ ಅಲೆಯುವಂತೆ ಆಗಬಾರದು. ಜನರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸರ್ಕಾರವೇ ಮನೆ ಬಾಗಿಲಿಗೆ ಬರಲಿದೆ ಎಂದರು.

ಜನರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಸಾಕಷ್ಟು ಕರೆಗಳು ಬರುತ್ತವೆ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದಲ್ಲಿ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದಾಗಿ ಸಚಿವರೇ ಖುದ್ದಾಗಿ ಜನರ ಸಮಸ್ಯೆಗಳನ್ನು ಆಲಿಸುವುದರಿಂದ ಗ್ರಾಮಕ್ಕೆ ಸಾಕಷ್ಟು ಲಾಭದಾಯಕವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಂದಾಯ ಸಚಿವರ ಗ್ರಾಮ ವಾಸ್ತವ್ಯದ ಸ್ಥಳದಲ್ಲಿ ಕೃಷಿ, ತೋಟಗಾರಿಗೆ ಸೇರಿದಂತೆ ಎಲ್ಲ ಇಲಾಖೆಗಳ ಮಳಿಗೆಗಳನ್ನು ನಿರ್ಮಿಸಿ ಸರ್ಕಾರದ ವಿವಿಧ ಇಲಾಖೆಗಳಿಂದ ಜನರಿಗಾಗಿ ಇರುವ ಯೋಜನೆಗಳ ಬಗ್ಗೆ ತಿಳಿಹೇಳುವ ಕೆಲಸವಾಗಬೇಕು. ಜನರು ಸುಲಭವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಗತ್ಯ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.

ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಮುಖಂಡ ಬಸವರಾಜ, ಶುವೈದ್ಯಕೀಯ, ಪಶು ಹಾಗೂ ಮೀನು ಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಸಂತ ಬಿರಾದಾರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿಶೂಲಾಬಾಯಿ ಝರೆಪ್ಪ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರ ಸಿಂಗ್, ಪಿಡಿ ವಿನೋದ ಕುಲಕರ್ಣಿ, ರಾಮಶೆಟ್ಟಿ ಪನ್ನಾಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT