ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಸಾರ ಭೇದಿ ಮುಕ್ತಿಗೆ ರೋಟಾ ವೈರಸ್‌ ಲಸಿಕೆ

ಜಿಲ್ಲಾಮಟ್ಟದ ಸಂಚಾಲನಾ ಸಮಿತಿ ಸಭೆಯಲ್ಲಿ ಡಾ. ತಾಳಿಕೋಟಿ ಹೇಳಿಕೆ
Last Updated 3 ಸೆಪ್ಟೆಂಬರ್ 2019, 15:36 IST
ಅಕ್ಷರ ಗಾತ್ರ

ಬೀದರ್‌: ‘ಮಕ್ಕಳಿಗೆ ಅತಿಸಾರ ಭೇದಿ ಆಗದಂತೆ ನೋಡಿಕೊಳ್ಳಲು ರೋಟಾ ವೈರಸ್ ಲಸಿಕೆ ಹಾಕಲಾಗುತ್ತಿದೆ’ ಎಂದು ವೈದ್ಯಾಧಿಕಾರಿ ಎ.ಎಸ್.ತಾಳಿಕೋಟಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಂಚಾಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳಿಗೆ ಅತಿಸಾರ ಭೇದಿ ಆಗದಂತೆ ನೋಡಿಕೊಳ್ಳಬೇಕು’ ಎಂದರು.

‘ರೋಟಾ ವೈರಸ್ ಲಸಿಕೆಯನ್ನು ಈಗಾಗಲೇ ದೇಶದ 11 ರಾಜ್ಯಗಳಲ್ಲಿ ಹಾಕಲಾಗಿದೆ. 12ನೇ ರಾಜ್ಯವಾಗಿ ಕರ್ನಾಟಕವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಲಸಿಕೆಯನ್ನು ಹಂತ ಹಂತವಾಗಿ ಎಲ್ಲ ರಾಜ್ಯಗಳಲ್ಲಿ ಕೊಡುವ ಯೋಜನೆ ಇದೆ’ ಎಂದು ತಿಳಿಸಿದರು.

‘ರೋಟಾ ವೈರಸ್‌ ಲಸಿಕೆ ಹೇಗೆ ಕೊಡಬೇಕು ಎನ್ನುವ ಬಗ್ಗೆ ಸಂಬಂಧಿಸಿದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ಕೊಡಲಾಗುವುದು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಆಯುಕ್ತ ಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್, ಡಾ.ಅನಿಲ ಚಿಂತಾಮಣಿ, ಡಾ.ರವೀಂದ್ರ ಸಿರಸಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಜ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಂಜುನಾಥ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಶಿವಕುಮಾರ ಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಶಂಕರ, ವೈದ್ಯಾಧಿಕಾರಿ ಡಾ.ದೀಪಾ ಖಂಡ್ರೆ, ಡಾ.ಇಂದುಮತಿ ಪಾಟೀಲ ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುಧಾಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT