ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಔರಾದ್: ಗಡಿಯಲ್ಲಿ ₹21 ಲಕ್ಷ ಮೌಲ್ಯದ ಗಾಂಜಾ ಜಪ್ತಿ

Published 27 ಜೂನ್ 2024, 12:18 IST
Last Updated 27 ಜೂನ್ 2024, 12:18 IST
ಅಕ್ಷರ ಗಾತ್ರ

ಔರಾದ್: ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಉಜನಿ ಬಳಿ ಪೊಲೀಸರು ಗುರುವಾರ ₹21 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.

ಬೈಕ್ ಮೇಲೆ ಸಾಗಿಸುತ್ತಿದ್ದ ಗಾಂಜಾ ಜಪ್ತಿ ಮಾಡಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹21.59 ಲಕ್ಷ ಮೌಲ್ಯದ 20.79 ಕೆಜಿ ಗಾಂಜಾ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡಿದ್ದಾರೆ.

ಸಿಪಿಐ ರಘುವೀರಸಿಂಗ್ ಠಾಕೂರ್ ನೇತೃತ್ವದಲ್ಲಿ ಪಿಎಸ್‍ಐ ಉಪೇಂದ್ರ, ಪಿಎಸ್‍ಐ ಮಹೆಬೂಬ್‍ಅಲಿ ಹಾಗೂ ಪಿಎಸ್‍ಐ ಸಿದ್ಧಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ.

ಈ ಕುರಿತು ಚಿಂತಾಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT