ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ವಿಮೆ ನೋಂದಣಿ ಮಾಡಿಸಿ: ಖೂಬಾ

ನಾಲ್ಕು ವರ್ಷಗಳಲ್ಲಿ ₹ 350 ಕೋಟಿ ಪರಿಹಾರ
Last Updated 12 ಜುಲೈ 2021, 13:52 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆಗಳ ನೋಂದಣಿ ಮಾಡಿಸಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮನವಿ ಮಾಡಿದ್ದಾರೆ.

ಯುನಿವರ್ಸಲ್ ಸೊಂಪೋ ಜನರಲ್ ಇನ್ಶೂರೆನ್ಸ್ ಕಂಪನಿಯು ಈಗಾಗಲೇ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳುತ್ತಿದೆ. ಸೋಯಾ, ತೊಗರಿ, ಉದ್ದು, ಹೆಸರು ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ ಬೆಳೆ ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

ಯೋಜನೆಯು ರೈತರ ಬೆಳೆಯ ಆಪ್ತರಕ್ಷಕವಾಗಿದೆ. ಎಲ್ಲ ರಾಷ್ಟ್ರೀಕೃತ ಬ್ಯಾಂಕ್‍ಗಳು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ನೋಂದಣಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆ ಅಥವಾ ಗೊಂದಲಗಳಿದ್ದರೆ ಇನ್ಶೂರೆನ್ಸ್ ಕಂಪನಿಯ ಟೋಲ್ ಫ್ರೀ ಸಂಖ್ಯೆ 1800-200-5142ಗೆ ಕರೆ ಮಾಡಬಹುದು. ಇಲ್ಲವೇ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಅಗ್ರ ಸ್ಥಾನ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬೀದರ್ ಜಿಲ್ಲೆಯು ಪ್ರತಿ ವರ್ಷ ದೇಶದಲ್ಲೇ ಅಗ್ರಸ್ಥಾನ ಪಡೆಯುತ್ತಿದೆ. ನಾಲ್ಕು ವರ್ಷಗಳಲ್ಲಿ ಜಿಲ್ಲೆಗೆ ರೂ. 350 ಕೋಟಿಗೂ ಅಧಿಕ ಬೆಳೆ ವಿಮೆ ಪರಿಹಾರ ದೊರಕಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT