ಬುಧವಾರ, ಡಿಸೆಂಬರ್ 11, 2019
19 °C

ವಿಮಾನ ನಿಲ್ದಾಣ: ಭೂಸ್ವಾಧೀನಕ್ಕೆ ₹4.23 ಕೋಟಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ನಾಗರಿಕ ವಿಮಾನ ನಿಲ್ದಾಣ ಅಭಿವೃದ್ಧಿಗೆ ಉದ್ದೇಶಿಸಿರುವ ರಾಜ್ಯ ಸರ್ಕಾರವು ಮೊದಲ ಹಂತದ ಎಟಿಎಸ್-72 ಕಾರ್ಯಾಚರಣೆಗೆ 5.39 ಎಕರೆ ಭೂ ಸ್ವಾಧೀನಕ್ಕೆ ₹4.23 ಕೋಟಿ ಬಿಡುಗಡೆ ಮಾಡಿದೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ಮನವಿಗೆ ಸ್ಪಂದಿಸಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಎಸ್‍ಐಐಡಿಸಿ)ವು ಜಿಲ್ಲಾಧಿಕಾರಿ ಖಾತೆಗೆ ಹಣ ಬಿಡುಗಡೆ ಮಾಡಿದೆ.

ಸೂರ್ಯಕಾಂತ ಅವರು ಬೀದರ್‌ನಿಂದ ಬೇಗ ನಾಗರಿಕ ವಿಮಾನಯಾನ ಸೇವೆ ಆರಂಭಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಾಪಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅವರು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದರು.

ನಾಗರಿಕ ವಿಮಾನ ನಿಲ್ದಾಣ ಆದಷ್ಟು ಬೇಗ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿಲ್ದಾಣ ಅಭಿವೃದ್ಧಿಗೆ ಇನ್ನೂ ಅಗತ್ಯ ಇರುವ ಅನುದಾನವನ್ನು ಹಂತ ಹಂತವಾಗಿ ಕೊಡುವ ಭರವಸೆ ನೀಡಿದೆ ಎಂದು ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)