ಭಾನುವಾರ, ಜನವರಿ 26, 2020
31 °C

ಚರ್ಚ್ ಅಭಿವೃದ್ಧಿಗೆ ₹50 ಲಕ್ಷ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಮಂಗಲಪೇಟ್‌ನಲ್ಲಿರುವ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಅಭಿವೃದ್ಧಿ ಹಾಗೂ ದುರಸ್ತಿಗೆ ತಮ್ಮ ವಿಶೇಷ ಅನುದಾನದಡಿ ₹50 ಲಕ್ಷ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ಮನವಿಗೆ ಸ್ಪಂದಿಸಿ ಈ ಆದೇಶ ನೀಡಿದ್ದಾರೆ.

ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ ಅವರು, ಮುಖ್ಯಮಂತ್ರಿ ಅವರ ಆದೇಶದನ್ವಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು