ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಯಮ ಉಲ್ಲಂಘಿಸಿದ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹ

Published 9 ಜೂನ್ 2024, 16:09 IST
Last Updated 9 ಜೂನ್ 2024, 16:09 IST
ಅಕ್ಷರ ಗಾತ್ರ

ಔರಾದ್: ಸರ್ಕಾರದ ನಿಯಮ ಉಲ್ಲಂಘಿಸುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ತಾಲ್ಲೂಕು ಅಧ್ಯಕ್ಷ ಚಂದು ಡಿ.ಕೆ. ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆ ನಿಯಮ ಉಲ್ಲಂಘಿಸಿ ಮನಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಇಲಾಖೆ ಅನುಮತಿ ಪಡೆಯದೇ ನಿಗದಿತ ಸಂಖ್ಯೆಗಿಂತ ಜಾಸ್ತಿ ಮಕ್ಕಳನ್ನು ಪ್ರವೇಶ ಪಡೆದಿದ್ದಾರೆ. ಮೂಲ ಸೌಲಭ್ಯವಿಲ್ಲದ ಖಾಸಗಿ ಕಟ್ಟಡಗಳಲ್ಲಿ ಶಾಲೆ ನಡೆಸಲಾಗುತ್ತಿದೆ. ಮಕ್ಕಳನ್ನು ಜಾನುರುಗಳಂತೆ ಕೂಡಿ ಹಾಕಲಾಗುತ್ತಿದೆ. ಬೋಧನೆಗೆ ಅರ್ಹತೆ ಇಲ್ಲದವನ್ನು ನೇಮಕ ಮಾಡಿಕೊಂಡು ಮಕ್ಕಳ ಭವಿಷ್ಯದ ಜತೆ ಚಲ್ಲಾಟ ಆಡುತ್ತಿದ್ದಾರೆ. ಕೆಲ ಶಾಲೆಗಳು ಕನ್ನಡ ಮಾಧ್ಯಮ ಎಂದು ಅನುಮತಿ ಪಡೆದು ಇಂಗ್ಲಿಷ್ ಕಲಿಸುತ್ತಿದ್ದಾರೆ. ಈ ಎಲ್ಲ ವಿಷಯ ಇಲ್ಲಿಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹೊತ್ತಿದ್ದರೂ ಮೌನಕ್ಕೆ ಜಾರಿ ತಾಲ್ಲೂಕಿನ ಶಿಕ್ಷಣ ವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಈ ವಿಷಯದಲ್ಲಿ ಮೇಲಾಧಿಕಾರಿಗಳು ಕಾಳಜಿ ವಹಿಸಿ ಕ್ರಮ ಕೈಗೊಳ್ಳಿದಿದ್ದಲ್ಲಿ ಹೋರಾಟ ಮಾಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT