ಕಮಲನಗರ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಲಕ್ಷಾಂತರ ಕುಟುಂಬಗಳು ಸಾಮಾಜಿಕ, ಆರ್ಥಿಕವಾಗಿ ಸಬಲೀಕರಣವಾಗಿವೆ’ ಎಂದು ಜಿಲ್ಲಾ ನಿರ್ದೇಶಕ ಮುರುಳಿಧರ ಎಚ್.ಎಲ್ ಹೇಳಿದರು.

ಪಟ್ಟಣದ ಬಸವ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಸಾಮೂಹಿಕ ಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಧರ್ಮಸ್ಥಳ ಧರ್ಮಾಧಿಕಾರಿ ವೀರೆಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ’ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮಡಿವಾಳಪ್ಪ ಮುರ್ಕೆ ಮಾತನಾಡಿ, ‘ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಕಾರ್ಯಕ್ರಮಗಳು ಗ್ರಾಮೀಣ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿದೆ’ ಎಂದು ಹೇಳಿದರು.

ಮುಖಂಡ ಮಹೇಶ ಸಜ್ಜನ ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಪ್ರಗತಿ ಮಾತ್ರವಲ್ಲ, ಆತ್ಮವಿಶ್ವಾಸ ಹೆಚ್ಚಿಸಿದೆ’ ಎಂದರು.

ಕ್ಷೇತ್ರ ಯೋಜನಾಧಿಕಾರಿ ರಾಘವೇಂದ್ರ.ಯು ಮಾತನಾಡಿದರು. ಡೋಣಗಾಂವ(ಎಂ) ಹಾವಗೀಸ್ವಾಮಿ ಮಠದ ಉಮಾಕಾಂತ ದೇಶಿಕೇಂದ್ರ ಸ್ವಾಮೀಜಿ, ನಿವೃತ್ತ ಶಿಕ್ಷಕ ಗುರುಬಸಯ್ಯಾಸ್ವಾಮಿ ಹಿರೇಮಠ, ಲಕ್ಷ್ಮಣ ಘಾಗರೆ, ಮುಖಂಡ ಭರತ ಕದಂ, ಶಶಿಕಾಂತ ಪಾಟೀಲ್, ಸಂತೋಷ ಬಿರಾದಾರ, ದೇವೇಂದ್ರಪ್ಪಾ ಪಾಟೀಲ್, ಮೇಲ್ವಿಚಾರಕ ಶರಣಬಸಪ್ಪಾ, ಕೃಷಿ ಮೇಲ್ವಿಚಾರಕ ಬಸ್ವರಾಜ ಪೂಜಾರಿ ಹಾಗೂ ಸ್ವಸಹಾಯ ಸಂಘದ ಸದಸ್ಯರು, ಮಹಿಳೆಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.