ಭಾಲ್ಕಿ: ನ.25, 26 ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ 44ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್.ಸೋಮನಾಥ ಭಾಗಿಯಾಗಲಿದ್ದಾರೆ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

ಬೆಂಗಳೂರಿನ ಇಸ್ರೋದ ಪ್ರಧಾನ ಕಚೇರಿಯಲ್ಲಿ ಗುರವಾರ ಅಧ್ಯಕ್ಷ ಎಸ್.ಸೋಮನಾಥ ಅವರನ್ನು ಸನ್ಮಾನಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಿದರು. 12ನೇ ಶತಮಾನದಲ್ಲಿ ಕಲ್ಯಾಣ ನೆಲದಲ್ಲಿ ಬಸವಾದಿ ಶರಣರು ಸಮ ಸಮಾಜವನ್ನು ಕಟ್ಟಿದರು. ಅಂತಹ ಶರಣರ ಭೂಮಿಗೆ ಆಗಮಿಸುವಂತೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ ಮತ್ತು ಡಾ.ಎ.ಎಸ್.ಕಿರಣಕುಮಾರ್ ಅವರನ್ನು ಕೋರಲಾಗಿದೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅನುಭವ ಮಂಟಪ ಉತ್ಸವದಲ್ಲಿ ಭಾಗವಹಿಸಿ, ಯುವ ಸಮುದಾಯಕ್ಕೆ ಪ್ರೇರಣೆ ಮಾತುಗಳನ್ನು ಹೇಳಲಿದ್ದಾರೆ ಎಂದು ತಿಳಿಸಿದರು. ಕಿರಣಕುಮಾರ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.