ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಪಾಪನಾಶ ದೇಗುಲಕ್ಕೆ ಅನುದಾನ ಕೊಡಿ’

Published : 13 ಆಗಸ್ಟ್ 2024, 15:54 IST
Last Updated : 13 ಆಗಸ್ಟ್ 2024, 15:54 IST
ಫಾಲೋ ಮಾಡಿ
Comments

ಬೀದರ್‌: ‘ನಗರದ ಪಾಪನಾಶ ದೇಗುಲದ ಜೀರ್ಣೊದ್ಧಾರಕ್ಕೆ ಕೇಂದ್ರ ಸರ್ಕಾರ ಘೋಷಿಸಿದ ₹22 ಕೋಟಿಯನ್ನು ಆದಷ್ಟು ಬೇಗ ಬಿಡುಗಡೆಗೊಳಿಸಬೇಕು’ ಎಂದು ಸಂಸದ ಸಾಗರ್‌ ಖಂಡ್ರೆ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೇಂದ್ರದ ಪ್ರಸಾದ್ ಯೋಜನೆಯಡಿ ಇತಿಹಾಸ ಪ್ರಸಿದ್ಧ ಕ್ಷೇತ್ರ ಪಾಪನಾಶ ಮಂದಿರ ಆಯ್ಕೆ ಮಾಡಲಾಗಿದೆ. ಮಂದಿರದ ಜೀರ್ಣೋದ್ಧಾರಕ್ಕೆ ₹22 ಕೋಟಿ ಅನುದಾನ ಘೋಷಣೆಯಾಗಿದೆ. ಅದನ್ನು ಶೀಘ್ರ ಬಿಡುಗಡೆಗೊಳಿಸಿದರೆ ದೇಗುಲದ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT