ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ್ ಖಂಡ್ರೆ ಮತ್ತೊಂದು ನಾಮಪತ್ರ ಸಲ್ಲಿಕೆ; ರೋಡ್ ಷೋ ಆರಂಭ

Published 17 ಏಪ್ರಿಲ್ 2024, 6:46 IST
Last Updated 17 ಏಪ್ರಿಲ್ 2024, 6:46 IST
ಅಕ್ಷರ ಗಾತ್ರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಯವರು ನಗರದಲ್ಲಿ ಬುಧವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು.

ಸಾಗರ್ ಖಂಡ್ರೆಯವರು ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ತಂದೆ, ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ಅಶೋಕ ಖೇಣಿ ಹಾಜರಿದ್ದರು.

ನಾಮಪತ್ರ ಸಲ್ಲಿಕೆ ನಂತರ ನಗರದ ಬಸವೇಶ್ವರ ವೃತ್ತದಿಂದ ಗಣೇಶ ಮೈದಾನದವರೆಗೆ ರೋಡ್ ಷೋ‌ಆರಂಭವಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಗಣೇಶ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ.

ಮಂಗಳವಾರ ಸಾಗರ್ ಖಂಡ್ರೆ ನಾಮಪತ್ರ ಸಲ್ಲಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT