ಸಾಯಿಕಿರಣ ಕುಲಕರ್ಣಿ ಕಲ್ಯಾಣ ಕರ್ನಾಟಕಕಕ್ಕೆ ಟಾಪರ್

ಬೀದರ್: ಬೆಂಗಳೂರಿನ ಅಟೊಮಿಕ್ ಅಕಾಡೆಮಿ ಸಂಯೋಜಿತ ಬೀದರಿನ ಶ್ರೀ ಮಾತೆ ಮಾಣಿಕೇಶ್ವರಿ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಸಾಯಿಕಿರಣ ರಮೇಶ ಕುಲಕರ್ಣಿ ಪ್ರಸಕ್ತ ವರ್ಷದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ 720 ಅಂಕಗಳ ಪೈಕಿ 685 ಅಂಕ ಗಳಿಸಿ ಕಲ್ಯಾಣ ಕರ್ನಾಟಕಕ್ಕೆ ಮೊದಲಿಗರಾಗಿದ್ದಾರೆ.
ಸಾಯಿಕಿರಣ ಅವರು ಅಖಿಲ ಭಾರತ ಮಟ್ಟದಲ್ಲಿ 714ನೇ ರ್‍ಯಾಂಕ್ ಮತ್ತು ಸಾಮಾನ್ಯ ವರ್ಗ ವಿಭಾಗದಲ್ಲಿ 464ನೇ ರ್‍ಯಾಂಕ್ ಪಡೆದಿದ್ದಾರೆ. ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಶೇ 98.21 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ನೀಟ್‌ನಲ್ಲಿ ಪ್ರೀತನ್ ಬಿ.ಆರ್ 643 ಅಂಕ, ಶಾಶ್ವತ ಪಿ.ಆರ್ 635 ಅಂಕ ಪಡೆದು ಸಾಧನೆಗೈದಿದ್ದಾರೆ. 26ಕ್ಕೂ ಹೆಚ್ಚು ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ.
ಈ ವರ್ಷ 85 ವಿದ್ಯಾರ್ಥಿಗಳಲ್ಲಿ 65 ವಿದ್ಯಾರ್ಥಿಗಳು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು ಪಡೆಯಲಿದ್ದಾರೆ. ಸಾಧನೆಗೈದವರಲ್ಲಿ ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಅಧ್ಯಕ್ಷ ರಮೇಶ ಕುಲಕರ್ಣಿ, ನಿರ್ದೇಶಕರಾದ ಪ್ರೊ. ಶ್ರೀಧರ ಎಸ್, ವಿಜಯ ಮಾನೆ, ರಘುನಂದನ್, ರಾಜೇಂದ್ರ ಬಾಬು, ಪ್ರಾಚಾರ್ಯ ಲೋಕೇಶ ಉಡಬಾಳೆ, ಉಪ ಪ್ರಾಚಾರ್ಯ ಟಿ. ಶೇಖರ ರೆಡ್ಡಿ, ಯೋಜನಾ ಮುಖ್ಯಸ್ಥ ಕೊಂಡಲರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.