ಸೋಮವಾರ, ಏಪ್ರಿಲ್ 6, 2020
19 °C
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಹೇಳಿಕೆ

ಸೇವಾಲಾಲ್‌ ತತ್ವಾ‌ದರ್ಶ ಪಾಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಸಂತ ಸೇವಾಲಾಲ್ ಅವರ ತತ್ವಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಲ್ಲಿಯ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸೇವಾಲಾಲರು ಪರೋಪ ಕಾರಿಯಾಗಿದ್ದರು. ಬಾಲ್ಯದಲ್ಲಿ ದನ ಮೇಯಿಸುತ್ತಿದ್ದ ಅವರು ತನಗಾಗಿ ಒಯ್ಯುತ್ತಿದ್ದ ಆಹಾರವನ್ನು ಇತರರಿಗೆ ಹಂಚುತ್ತಿದ್ದರು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ,‘ಸೇವಾಲಾಲರ ಜಯಂತಿ ಆಚರಣೆ ಮಾತ್ರವೇ ಸೀಮಿತವಾಗಬಾರದು. ಅವರ ತತ್ವಾದರ್ಶಗಳು ನಿಜ ಜೀವನದಲ್ಲಿ ಆಚರಣೆಗೆ ಬರಬೇಕು’ ಎಂದು ತಿಳಿಸಿದರು.

ಶಾಸಕ ರಹೀಂ ಖಾನ್ ಮಾತನಾಡಿ, ‘ಸೇವಾಲಾಲರು ಸಣ್ಣ ಸಮುದಾಯದಲ್ಲಿ ಜನಿಸಿ, ಸಮಾಜಕ್ಕೆ ಉನ್ನತ ಸಂದೇಶಗಳನ್ನು ನೀಡಿದ್ದರು. ಅಂತಹ ಮಹನೀಯರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು’ ಎಂದು ನುಡಿದರು.

ಮನ್ನಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸುಭಾಷ ರಾಠೋಡ್ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ತಾರಾಬಾಯಿ ರಾಠೋಡ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ಬರೂರ, ಸದಸ್ಯ ಪ್ರಕಾಶ ಜಾಧವ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ್ ಗಾಳಿ, ಮುಖಂಡರಾದ ಬಸವರಾಜ ಪವಾರ್, ಗೋವರ್ಧನ್ ರಾಠೋಡ್, ಪಂಡಿತರಾವ್ ಚಿದ್ರಿ, ಅಮೃತರಾವ್ ಚಿಮಕೋಡೆ, ಮಾಣಿಕರಾವ್ ಪವಾರ್ ಬಸವರಾಜ ಪವಾರ್, ಪ್ರೇಮಸಿಂಗ್ ಪವಾರ್, ಲತಾ ರಾಠೋಡ್ ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸ್ವಾಗತಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)