ಅಸಮತೋಲನ ನಿವಾರಣಾ ಸಮಿತಿ ಸಭೆ ಇಂದು
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ನಗರದಲ್ಲಿ ಸೋಮವಾರ (ಜೂ.9) ಸಭೆ ಸೇರಲಿದ್ದು ನಂಜುಂಡಪ್ಪ ವರದಿ ಅನುಷ್ಠಾನದಿಂದ ಯಾವ ತಾಲ್ಲೂಕುಗಳು ಅಭಿವೃದ್ಧಿ ಹೊಂದಿವೆ. ಯಾವ ತಾಲ್ಲೂಕುಗಳು ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದುಳಿದಿವೆ ಎಂಬುದರ ಮೇಲೆ ಚರ್ಚೆ ನಡೆಸಲಿದೆ. ಅಸಮಾನತೆಯ ಹೋಗಲಾಡಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಂದ ಮಾಹಿತಿ ಕಲೆ ಹಾಕುವ ಕೆಲಸ ಮಾಡಲಿದೆ.