ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜ್ಞಾನಾರ್ಜನೆಗೆ ಸಂವಿಧಾನ ಪೂರಕ’

Last Updated 27 ನವೆಂಬರ್ 2022, 16:08 IST
ಅಕ್ಷರ ಗಾತ್ರ

ಔರಾದ್: ‘ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನ ಪಡೆಯಲು ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು’ ಎಂದು ಸಂಪನ್ಮೂಲ ಶಿಕ್ಷಕ ಜಗನ್ನಾಥ ದೇಶಮುಖ ಹೇಳಿದರು.

ತಾಲ್ಲೂಕಿನ ಸಂತಪುರದ ಸಿದ್ಧರಾಮೇಶ್ವರ ಕಾಲೇಜಿನಲ್ಲಿ ಶನಿವಾರ ನಡೆದ ಪುನಶ್ಚೇತನ ಕಾರ್ಯಾಗಾರದಲ್ಲಿ ಅವರು ಸಂವಿಧಾನದ ಕುರಿತು ಉಪನ್ಯಾಸ ನೀಡಿದರು. ‘ಡಾ.ಬಿ.ಆರ್‌.ಅಂಬೇಡ್ಕರ್ ಅವರು ಜಗತ್ತಿನ ಎಲ್ಲ ಸಂವಿಧಾನ ಹಾಗೂ ಕಾನೂನನ್ನು ಪೂರ್ಣವಾಗಿ ತಿಳಿದುಕೊಂಡು ಭಾರತೀಯರಿಗೆ ಬೇಕಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ’ ಎಂದರು.

ಪ್ರಾಂಶುಪಾಲ ನವೀಲಕುಮಾತ ಉತ್ಕಾರ್ ಮಾತನಾಡಿದರು.

ಉಪನ್ಯಾಸಕ ಶಿವಪುತ್ರ ಧರಣೆ, ಮೀರಾಬಾಯಿ ಕಾಂಬಳೆ, ಕಲ್ಲಪ್ಪ ಬುಟ್ಟೆ, ಸುಧಾ ಕೌಟಗಿ, ಅಂಬಿಕಾ ವಿಶ್ವಕರ್ಮ, ವನದೇವಿ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT