ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮಾರಪಳ್ಳಿ ಆಸ್ಪತ್ರೆ, ಫೌಂಡೇಷನ್ ಕಾರ್ಯ ಮಾದರಿ: ನಟ ಶಿವರಾಜಕುಮಾರ ಮೆಚ್ಚುಗೆ

Last Updated 9 ಜನವರಿ 2023, 13:51 IST
ಅಕ್ಷರ ಗಾತ್ರ

ಬೀದರ್: ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯು ಈ ಭಾಗದ ಜನ ಸಾಮಾನ್ಯರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುತ್ತಿರುವುದು ಮಾದರಿಯಾಗಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಬೀದರ್ ಉತ್ಸವ ನಿಮಿತ್ತ ಸೋಮವಾರ ನಗರಕ್ಕೆ ಆಗಮಿಸಿದ ಅವರು, ನಾಗಮಾರಪಳ್ಳಿ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ರೋಗಿಗಳೊಂದಿಗೆ ಮಾತನಾಡಿದರು.

ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಹಾಗೂ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆ ಸೇರಿ ಕೋವಿಡ್ ಸಮಯದಲ್ಲಿ ಸಲ್ಲಿಸಿದ ಸೇವೆ ಅನುಪಮವಾಗಿದೆ. ಒಂದೇ ರೂಪಾಯಿಗೆ ಚಿಕಿತ್ಸೆ, ಔಷಧಿ, ಊಟ, ಉಪಹಾರ, ವಸತಿ ಮೊದಲಾದ ಸೌಲಭ್ಯಗಳನ್ನು ಒದಗಿಸಿದ ಮತ್ತೊಂದು ಆಸ್ಪತ್ರೆ ಇದ್ದಿರಲಿಕ್ಕಿಲ್ಲ ಎಂದು ಶ್ಲಾಘಿಸಿದರು.

ನಾಗಮಾರಪಳ್ಳಿ ಆಸ್ಪತ್ರೆ ಹಾಗೂ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು, ಆಸ್ಪತ್ರೆಯಲ್ಲಿನ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಹಾಗೂ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯಿಂದ ವಿಶೇಷ ಚಿಕಿತ್ಸೆ ನೀಡಲಾಗಿದೆ. ಕೋವಿಡ್ ಚಿಕಿತ್ಸಾ ಕೇಂದ್ರ ಆರಂಭಿಸಿ ಒಂದೇ ರೂಪಾಯಿಯಲ್ಲಿ ಉಪಹಾರ, ಊಟ, ಚಿಕಿತ್ಸೆ, ಔಷಧಿ ಒದಗಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ನಾಗಮಾರಪಳ್ಳಿ ಫೌಂಡೇಷನ್‍ನಿಂದ ಆಂಬುಲನ್ಸ್ ಸೇವೆ ಒದಗಿಸಲಾಗಿತ್ತು ಎಂದರು.

ಕೋವಿಡ್ ಲಾಕ್‍ಡೌನ್‍ನಿಂದ ಕೆಲಸ ಕಳೆದುಕೊಂಡ ಸಾವಿರಾರು ಪರಿವಾರಗಳಿಗೆ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್‍ನಿಂದ ಆಹಾರ ಕಿಟ್ ವಿತರಿಸಲಾಗಿದೆ. ಬೀದರ್ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದರು.

ಆಯುಷ್ಮಾನ್ ಭಾರತ ಕಾರ್ಡ್, ಮಾಸಾಶನ ಸೇರಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನವನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಕಾರ್ಯವನ್ನು ಫೌಂಡೇಷನ್ ಮಾಡುತ್ತಿದೆ ಎಂದು ಹೇಳಿದರು.

ಅಂಗವಿಕಲರಿಗೆ ಗಾಲಿಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಮಾಜಿ ಶಾಸಕ ಅಶೋಕ ಖೇಣಿ, ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ನಿರ್ದೇಶಕ ತರುಣ್ ಸೂರ್ಯಕಾಂತ್ ನಾಗಮಾರಪಳ್ಳಿ, ಆಸ್ಪತ್ರೆಯ ಸಿಇಒ ಎನ್. ಕೃಷ್ಣಾರೆಡ್ಡಿ, ಚಿತ್ರ ನಿರ್ಮಾಪಕ ಶ್ರೀಕಾಂತ್, ಶಂಕರ ಪಾಟೀಲ ಅತಿವಾಳ್, ಸಂಗಮೇಶ ಪಾಟೀಲ, ವೀರಶೆಟ್ಟಿ ಪಟ್ನೆ, ಶೈಲೇಶ ತಡಕಲ್, ಶಾಂತು ಹಳ್ಳದಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗರಾಜ ಮಠ್, ಬ್ರಿಮ್ಸ್‍ನ ಜಿಲ್ಲಾ ವಿಕಲಚೇತನರ ಪುನರ್‍ವಸತಿ ಕೇಂದ್ರದ ಸಂಜು ಕೋರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT