ಬೀದರ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸಂಧ್ಯಾರಾಣಿ ರಾಮ ನರೋಟೆ ಅವರನ್ನು ಶುಕ್ರವಾರ ಜಿಲ್ಲಾ ಪಂಚಾಯಿತಿ ಪ್ರಭಾರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಸಿಇಒ ಅವರ ಕೋರಿಕೆ ಮೇರೆಗೆ ಔರಾದ್ ತಾಲ್ಲೂಕಿನ ಏಕಂಬಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸುಂಧಾಳದ ಸಂಧ್ಯಾರಾಣಿ ಅವರು ಶುಕ್ರವಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಹಾಗೂ ಉಪ ಕಾರ್ಯದರ್ಶಿ ಸೂರ್ಯಕಾಂತ ಅವರು ಹೊಸ ಅಧ್ಯಕ್ಷರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನ ತೆರವಾದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮ 179(6) ಪ್ರಕಾರ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡಲು ಅವಕಾಶ ಇದೆ. ಪ್ರಾದೇಶಿಕ ಆಯುಕ್ತರ ನಿರ್ದೇಶನದ ಪ್ರಕಾರ ಪ್ರಭಾರ ಸಂಧ್ಯಾರಾಣಿ ಅವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.