ಬುಧವಾರ, ಜನವರಿ 26, 2022
25 °C

ಬೀದರ್: ದೇವೇಂದ್ರ ಕರಂಜೆಗೆ ಸಂಘಸಿರಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ತುಮಕೂರಿನ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದಿಂದ ಕೊಡುವ ಪ್ರಸಕ್ತ ಸಾಲಿನ 'ಸಂಘಸಿರಿ' ಪ್ರಶಸ್ತಿಗೆ ಸಂಘದ ಬೀದರ್ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ಆಯ್ಕೆಯಾಗಿದ್ದಾರೆ.

ಸಿದ್ದಗಂಗಾ ಮಠದ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿ ಮಠದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2022 ಜನವರಿ 2 ರಂದು ಸಿದ್ದಗಂಗಾ ಮಠದ ಆವರಣದಲ್ಲಿ ನಡೆಯಲಿರುವ ಸಂಘದ 66 ನೇ ಸರ್ವ ಸದಸ್ಯರ ಮಹಾ ಅಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಕಾರ್ಯದರ್ಶಿ ಕೆ.ಎಚ್. ಶಿವರುದ್ರಯ್ಯ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.