ಸೋಮವಾರ, ಜನವರಿ 20, 2020
20 °C

ಫೆ.2ರಂದು 'ಬಿದರಿ' ಸಂಗೀತೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಬಿದರಿ’ ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಫೆ.2ರಂದು ಸಂಗೀತೋತ್ಸವ ಅಯೋಜಿಸಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ನಗರದಲ್ಲಿ ನಡೆದ ಸಂಗೀತೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಡಿ.29ರಂದು ಪೇಜಾವರ ಶ್ರೀಗಳು ಕೃಷ್ಣಕ್ಯರಾದ ಕಾರಣ ಅಂದು ಸಂಗೀತೋತ್ಸವ ಮುಂದೂಡಬೇಕಾಯಿತು’ ಎಂದರು.

‘ರಾಷ್ಟ್ರಕವಿ ಕುವೆಂಪು ಹಾಗೂ ಗಾನ ಗಾರುಡಿಗ ಸಿ.ಅಶ್ವಥ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಗಾಯಕಿ ನಾಗಚಂದ್ರಿಕಾ ಭಟ್ ಹಾಗೂ ಇತರರು ಮತ್ತೆ ಆಗಮಿಸಲಿದ್ದಾರೆ’ ಎಂದು ಹೇಳಿದರು.

ಬಿದರಿ ಟ್ರಸ್ಟ್‌ ಅಧ್ಯಕ್ಷೆ ರೇಖಾ ಅಪ್ಪಾರಾವ್ ಸೌದಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ಈ ಹಿಂದೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿ, ಈ ಮುಂದೆ ಜರುಗಲಿರುವ ಕಾರ್ಯಕ್ರಮಕ್ಕೆ ಅದೇ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶರತ್ ಅಭಿಮಾನ, ಜಾನಪದ ವಿದ್ವಾಂಸ ಶಂಭುಲಿಂಗ ವಾಲ್ದೊಡ್ಡಿ, ಹಿರಿಯ ಸಾಹಿತಿ ಡಾ. ಎಂ.ಜಿ ದೇಶಪಾಂಡೆ, ವಿ.ಕೆ ಇಂಟರ್‌ನ್ಯಾಷನಲ್‌ ಸ್ಕೂಲ್ ಕಾರ್ಯದರ್ಶಿ ದಿಲೀಪ ಕಮಠಾಣೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶೆಟ್ಟಿ ಧರಂಪೂರ, ಶಾರದಾ ರುಡಸೆಟಿ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಶ್ರೀಮಂತ ಸಪಾಟೆ, ಸಮಾಜ ಜೀವಿ ಅರವಿಂದ ಕುಲಕರ್ಣಿ ಇದ್ದರು.

ಡಿ.ಎಸ್.ಎಸ್ ರಾಜ್ಯ ಸಂಚಾಲಕ ಮಾರುತಿ ಬೌದ್ದೆ, ಮಾದಿಗ ದಂಡೋರಾ ಹೋರಾಟ ಸಮಿತಿ ಅಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್, ಕರ್ನಾಟಕ ರಾಜ್ಯ ಶುಶ್ರೂಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮಾಳಗೆ, ವಿಶ್ವವಿದ್ಯಾಲಯ ನಿವೃತ್ತ ನೌಕರರ ಸಂಘದ ಅಧ್ಯಕ್ಷ ವೀರಭದ್ರಪ್ಪ ಉಪ್ಪಿನ್, ರಾಷ್ಟ್ರೀಯ ಜಾನಪದ ಬುಡಕಟ್ಟು ಕಲಾ ಪರಿಷತ್ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ ಪ್ರಭುಲಿಂಗ ಸ್ವಾಮಿ, ಅಂಬಿಗರ ಚೌಡಯ್ಯ ಯುವ ಸೇನೆ ಅಧ್ಯಕ್ಷ ಸುನೀಲ ಭಾವಿಕಟ್ಟಿ, ಎಂ.ಪಿ ಮುದಾಳೆ, ಪ್ರೌಢಶಾಲೆ ಸಹ ಶಿಕ್ಷಕ ಸಮಘದ ಅಧ್ಯಕ್ಷ ಪಾಂಡುರಂಗ ಬೆಲ್ದಾರ, ಟೀಮ್ ಯುವಾದ ವಿನಯ ಮಾಳಗೆ ಇದ್ದರು.

ಜಾನಪದ ಕಲಾವಿದ ವಿಜಯಕುಮಾರ ಸೋನಾರೆ ನಿರೂಪಿಸಿದರು. ‘ಬಿದರಿ’ ಸಾಂಸ್ಕೃತಿ ವೇದಿಕೆಯ ಅಪ್ಪಾರಾವ್ ಸೌದಿ ವಂದಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು