ಬೀದರ್: ಮಹಾ ಸೂಫಿ ಸಂತ ಖುತುಬಿ ಸಾಹೇಬರ ಜಾತ್ರಾ ಮಹೋತ್ಸವ ಸಮಿತಿಯು ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದಲ್ಲಿ ಮಾ. 22 ಮತ್ತು 23 ರಂದು ನಮ್ಮೂರು ಸಂಗೋಳಗಿ ಹಬ್ಬ-2023 ಹಮ್ಮಿಕೊಂಡಿದೆ.
ಹಬ್ಬದ ಅಂಗವಾಗಿ ಗ್ರಾಮದ ಖುತುಬಿ ಸಾಹೇಬರ ದರ್ಗಾದಲ್ಲಿ ಮಾ. 22 ರಂದು ಬೆಳಿಗ್ಗೆ 10 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 2.30ಕ್ಕೆ ಕವ್ವಾಲಿ, ಸಂಜೆ 4ಕ್ಕೆ ಪಲ್ಲಕ್ಕಿ ಮಹೋತ್ಸವ ಜರುಗಲಿದೆ.
ಮಾ. 23 ರಂದು ಬೆಳಿಗ್ಗೆ 8.30ಕ್ಕೆ ಜಂಗಿ ಕುಸ್ತಿ ಸ್ಪರ್ಧೆಗಳು ನಡೆಯಲಿವೆ ಎಂದು ಪ್ರಮುಖರಾದ ಶಿವಕುಮಾರ ಕಾಶೆಂಪುರೆ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.