ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 200 ಸೀರೆಗಳ ಜಪ್ತಿ

Published 30 ಮಾರ್ಚ್ 2024, 14:44 IST
Last Updated 30 ಮಾರ್ಚ್ 2024, 14:44 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್ ಜಿಲ್ಲೆ): ತಾಲ್ಲೂಕಿನ ಮಹಾರಾಷ್ಟ್ರ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಖಲೆ ಇಲ್ಲದೆ ಸೂರತ್ ನಿಂದ ಹೈದರಾಬಾದ್‌ಗೆ ಸಾಗಿಸುತ್ತಿದ್ದ 200 ಸೀರೆಗಳನ್ನು ಜಪ್ತಿ ಮಾಡಲಾಗಿದೆ.

ಲೋಕಸಭೆ ಚುನಾವಣೆ ಅಂಗವಾಗಿ ಇಲ್ಲಿನ ಚೆಕ್ ಪೋಸ್ಟ್ ನಲ್ಲಿ ಕಾರು ಪರಿಶೀಲಿಸಿದಾಗ ಸೀರೆ ಇರುವುದು ಗೊತ್ತಾಗಿದೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಮಹೇಶ ಪಾಟೀಲ ನೇತೃತ್ವದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿ ಸೀರೆಗಳನ್ನು ಜಪ್ತಿ ಮಾಡಲಾಯಿತು. ಕಣ್ಗಾವಲು ಸಮಿತಿಯ ಸದಸ್ಯರಾದ ಆನಂದ, ಪೊಲೀಸ್ ಅಧಿಕಾರಿ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ನೀಡಿ: ಚುನಾವಣೆ ಅಥವಾ ಇತರೆ ಯಾವುದೇ ಕಾರಣಕ್ಕಾಗಿ ಉಚಿತವಾಗಿ ಸೀರೆ, ಕುಕ್ಕರ್ ಮತ್ತಿತರೆ ಸಾಮಗ್ರಿ ವಿತರಿಸುವುದು ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದು ವಾಣಿಜ್ಯ ತೆರಿಗೆ ಅಧಿಕಾರಿ ಮಹೇಶ ಪಾಟೀಲ ಸಲಹೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ತಿ ಮಾಡಿಕೊಂಡಿದ್ದ 200 ಸೀರೆಗಳನ್ನು ₹20 ಸಾವಿರ ದಂಡ ವಿಧಿಸಿ ಹಿಂದಿರುಗಿಸಲಾಗಿದೆ ಎಂದು ಸಹ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT