ಗುರುವಾರ , ನವೆಂಬರ್ 21, 2019
20 °C

ಗ್ರಾಮೀಣ ಕಲೆ ಉಳಿವಿಗೆ ಶ್ರಮಿಸಿ: ಈಶ್ವರ ಖಂಡ್ರೆ

Published:
Updated:
Prajavani

ಭಾಲ್ಕಿ: ಇಂದಿನ ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿದ್ದು, ಗ್ರಾಮೀಣ ಕಲೆಗಳು ನಶಿಸುತ್ತಿವೆ ಎಂದು ಶಾಸಕ ಈಶ್ವರ ಖಂಡ್ರೆ ಕಳವಳ ವ್ಯಕ್ತಪಡಿಸಿದರು.

ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಸೇವಾಲಾಲ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಬೀದರ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಹಾಸು ಹೊಕ್ಕಾಗಿರುವ ಜಾನಪದ ಸಾಹಿತ್ಯ, ಕಲೆ ಪ್ರಕಾರಗಳು ಉಳಿಸುವ ಕೆಲಸ ಆಗಬೇಕಿದೆ. ಸುಗ್ಗಿ ಹಾಡು ಹಾಗೂ ಇತರ ಜಾನಪದ ಸಾಹಿತ್ಯ ಮತ್ತು ಕಲೆಗಳನ್ನು ಮುಂದಿನ ತಲೆಮಾರಿಗೂ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೊಡಿಸಬೇಕಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಜನಪದ ಸಾಹಿತ್ಯ ಪರಿಷತ್‍ ಅಧ್ಯಕ್ಷ ಅಶೋಕ ಮೈನಾಳೆ ಮಾತನಾಡಿದರು. ಶಿವಯೋಗೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣರಾವ್ ಮೋರೆ, ಹುಲಸೂರು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಸುಧೀರ ಕಾಡಾದಿ, ಹಲಬರ್ಗಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಅಂಬಾದಾಸ ಕೋರೆ,  ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತರಾವ್ ಚವ್ಹಾಣ, ತಾಲ್ಲೂಕು ಪಂಚಾಯಿತಿ ಸದಸ್ಯ ಶಂಕರರಾವ್ ಭೋರಾಳೆ, ಮಾಜಿ ಸದಸ್ಯ ಮುಸ್ತಾಕ ಅಹ್ಮದ್, ತಾಲ್ಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಶಿಧರ ಕೋಸಂಬೆ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಮನೋಹರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಧನರಾಜ ಟೊಕ್ರೆ, ಪ್ರೌಢಶಾಲೆ ಮುಖ್ಯಶಿಕ್ಷಕ ಅಶೋಕ ಬರ್ಮಾ, ಡಾ.ಕಾಶಿನಾಥ ಚಲುವಾ, ಜನಪದ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಆಶಾ ರಾಠೋಡ ಇದ್ದರು.

ಸೇವಾಲಾಲ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ದಯಾನಂದ ಜಾಧವ ಸ್ವಾಗತಿಸಿದರು. ಗಣಪತರಾವ್ ಕಲ್ಲೂರೆ ನಿರೂಪಿಸಿ, ವಂದಿಸಿದರು.

ಪ್ರತಿಕ್ರಿಯಿಸಿ (+)