ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ಇಬ್ಬರು ಚಿಂದಿ ಆಯುವ ಮಕ್ಕಳ ರಕ್ಷಣೆ

Published 3 ಜೂನ್ 2023, 13:50 IST
Last Updated 3 ಜೂನ್ 2023, 13:50 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣದಲ್ಲಿ ಶನಿವಾರ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಚಿಂದಿ ಆಯುವ, ಭಿಕ್ಷೆ ಬೇಡುವ ಹಾಗೂ ಬಾಲಕಾರ್ಮಿಕ ಮಕ್ಕಳ ರಕ್ಷಣಾ ಕಾರ್ಯಾಚರಣೆ ನಡೆಯಿತು.

ಬಸವೇಶ್ವರ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ, ಸುಭಾಷ, ಶಿವಾಜಿ ವೃತ್ತ, ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ದಾಳಿ ನಡೆಸಿ ಇಬ್ಬರು ಚಿಂದಿ ಆಯುವ ಮಕ್ಕಳನ್ನು ರಕ್ಷಿಸಲಾಗಿದೆ. ಈ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ, ಪಾಲಕರಿಂದ ಇನ್ನೂ ಮುಂದೆ ಮಕ್ಕಳನ್ನು ಚಿಂದಿ ಆಯುಲು ಕಳುಹಿಸುವುದಿಲ್ಲ. ಶಾಲೆಗೆ ಕಳುಹಿಸುತ್ತೇವೆ ಎಂಬ ಮುಚ್ಚಳಿಕೆ ಪತ್ರವನ್ನು ಬರೆಯಿಸಿಕೊಂಡು, ಪಾಲಕರ ವಶಕ್ಕೆ ನೀಡಲಾಗಿದೆ.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸತೀಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳುವಾಲೆ, ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ, ಇಸಿಒ ಸುಭಾಷ ಹುಲಸೂರೆ, ದೈಹಿಕ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ, ಡಾ.ಕಪಿಲ್ ರೆಡ್ಡಿ, ಮಹಾದೇವ ಭೂರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT