ಬೀದರ್: ‘19ನೇ ಶತಮಾನದಲ್ಲೇ ಶಾಲೆಗಳನ್ನು ಆರಂಭಿಸಿ, ಅಕ್ಷರ ಕಲಿಸಿದವರು ಸಾವಿತ್ರಿಬಾಯಿ ಫುಲೆ. ಅಂದಿನ ಬ್ರಿಟಿಷ್ ಸರ್ಕಾರ ಅವರನ್ನು ಭಾರತದ ಮೊದಲ ಶಿಕ್ಷಕಿಯೆಂದು ಗುರುತಿಸಿ, ಪ್ರಶಸ್ತಿ ನೀಡಿ, ಗೌರವಿಸಿತ್ತು’ ಎಂದು ಲೇಖಕಿ ಕಾವ್ಯಶ್ರೀ ಮಹಾಗಾಂವಕರ್ ತಿಳಿಸಿದರು.

ನಗರದ ಜೀಜಾಮಾತಾ ಶಿಕ್ಷಣ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಅಮೋಘ ಸಾಧನೆ ಮಾಡಿರುವುದಕ್ಕೆ ಸಾವಿತ್ರಿಬಾಯಿ ಫುಲೆ ಅವರನ್ನು ಇಂದಿಗೂ ಸ್ಮರಿಸಿಕೊಳ್ಳುತ್ತಿದ್ದೇವೆ. ಮಹಿಳೆಯರಿಗೆ ಅವರ ಸಾಧನೆ ಪ್ರೇರಣೆ ಎಂದರು.

ಸಾವಿತ್ರಿಬಾಯಿ ಫುಲೆ ದೇಶದಲ್ಲಿ ಮಹಿಳಾ ಸಾಕ್ಷರತೆಗೆ ಶ್ರಮಿಸಿದ್ದರು. ಎಷ್ಟೇ ಪ್ರತಿಕೂಲ ಪರಿಸ್ಥಿತಿ ಎದುರಾದರೂ ಅದರಿಂದ ಹಿಂದೆ ಸರಿಯಲಿಲ್ಲ. ಅಂದುಕೊಂಡಿದ್ದನ್ನು ಮಾಡಿ ತೋರಿಸಿದ್ದರು ಎಂದು ಅಂಚೆ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಗಲಾ ಭಾಗವತ್ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾಯದರ್ಶಿ ಪ್ರಭುಲಿಂಗ ತೂಗಾವೆ, ಜಿಲ್ಲಾ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ಅಧ್ಯಕ್ಷೆ ಸಾರಿಕಾ ಗಂಗಾ, ಎಸ್ಸಿಎಸ್ ಸಮಿತಿಯ ಕಾರ್ಯದರ್ಶಿ ಸತೀಶಕುಮಾರ ಮುಳೆ, ಎಸ್.ಎಸ್.ಭಟ್ಟ ಲೋಕೇಶ್ವರ, ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ, ಜೀಜಾಮಾತಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಅರ್ಜುನ ಧೂಳೆ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಾಸುದೇವ ರಾಠೋಡ್, ಶಿಕ್ಷಕರಾದ ರಾಜಕುಮಾರ ಗಾದಗೆ, ಅನಿಲಕುಮಾರ ಟೆಕೋಳೆ, ಮಲ್ಲಿಕಾರ್ಜುನ ಬಂಬುಳಗೆ, ಆನಂದ ಜಾಧವ್, ಉಷಾ ಪಾಟೀಲ, ನಾಗರತ್ನ, ಲತಾ, ಸಂಜಯ್ ಪಾಟೀಲ, ಬಸವರಾಜ, ಕುಮಾರಸ್ವಾಮಿ, ವಿವೇಕ ಪಾಟೀಲ, ತಾನಾಜಿ ನೀರಗುಡೆ, ಭೀಮಶ್ಯಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.