ಶುಕ್ರವಾರ, ಡಿಸೆಂಬರ್ 6, 2019
19 °C

ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದರ್ ಕಂದಾಯ ವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಉಸ್ತುವಾರಿ ಸಮಿತಿಯ ಸಭೆ ನಗರದಲ್ಲಿ ಮಂಗಳವಾರ ನಡೆಯಿತು.

ಸಭೆಯಲ್ಲಿ 2019 ರ ಜೂನ್‌ನಿಂದ ಸೆಪ್ಟೆಂಬರ್ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ಮಾಡಲಾಯಿತು.

ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಸದಸ್ಯರಾದ ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ್ ಮಲ್ಕಾಪೂರೆ, ಎಂ.ಎಸ್. ಕಟಗಿ, ಸುಧಾಕರ ಏಕಂಬೇಕರ್, ಕೀರ್ತಿ ಚಾಲಕ್, ಧನರಾಜ ಬೋರಾಳೆ, ಮಾಣಿಕರಾವ್, ಸಮಿತಿಯ ಸದಸ್ಯ ಕಾರ್ಯದರ್ಶಿ ಅನಿಲಕುಮಾರ ಮೇಲ್ದೊಡ್ಡಿ ಇದ್ದರು.

ಪ್ರತಿಕ್ರಿಯಿಸಿ (+)