ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯ ಪ್ರಕರಣ: ಶೀಘ್ರ ಪರಿಹಾರ ಒದಗಿಸಿ- ಗರಿಮಾ ಪನ್ವಾರ್ ಸೂಚನೆ

ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಸಮಿತಿ ಸಭೆ
Last Updated 29 ಡಿಸೆಂಬರ್ 2021, 5:37 IST
ಅಕ್ಷರ ಗಾತ್ರ

ಬೀದರ್: ದೌರ್ಜನ್ಯ ಪ್ರಕರಣಗಳಲ್ಲಿ ಎಲ್ಲ ಸಂತ್ರಸ್ತರಿಗೂ ಶೀಘ್ರ ಪರಿಹಾರ ಧನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್ ಸೂಚಿಸಿದರು.

ಇಲ್ಲಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಬೀದರ್ ಉಪ ವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಹಾಗೂ ಸಫಾಯಿ ಕರ್ಮಚಾರಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಬೀದರ್ ತಾಲ್ಲೂಕಿನಲ್ಲಿ ಜನವರಿಯಿಂದ ಈವರೆಗೆ ಮೂರು ಪ್ರಕರಣಗಳು ದಾಖಲಾಗಿವೆ. ಎಲ್ಲ ಪ್ರಕರಣಗಳಲ್ಲೂ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಲಾಗಿದೆ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಸಭೆಗೆ ಮಾಹಿತಿ ನೀಡಿದರು.

ಔರಾದ್ ತಾಲ್ಲೂಕಿನಲ್ಲಿ ಏಳು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಈಗಾಗಲೇ ನಾಲ್ಕು ಪ್ರಕರಣಗಳ ಸಂತ್ರಸ್ತರಿಗೆ ಪರಿಹಾರ ಧನ ಒದಗಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ನಡೆಸಲಾಯಿತು. ಸಫಾಯಿ ಕರ್ಮಚಾರಿಗಳ ಪುನರ್ ವಸತಿ, ಸ್ವಯಂ ಉದ್ಯೋಗಕ್ಕೆ ನೆರವು ಮೊದಲಾದ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಎಂ.ಎಸ್. ಕಟಗಿ, ಸುಧಾಕರ ಏಕಂಬೇಕರ್, ಸಫಾಯಿ ಕರ್ಮಚಾರಿ ಉಸ್ತುವಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯ ಮುಕೇಶ, ಬೀದರ್ ಡಿವೈಎಸ್‍ಪಿ ಕೆ.ಎಂ. ಸತೀಶ್, ಬೀದರ್ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ಔರಾದ್ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ನಗರಸಭೆ ಪರಿಸರ ಎಂಜಿನಿಯರ್ ರವೀಂದ್ರ ಕಾಂಬಳೆ, ಬೀದರ್, ಔರಾದ್ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಅಂಬೇಡ್ಕರ್ ನಿಗಮದ ಅಧಿಕಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT