ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಸ್ಥಾನದಲ್ಲಿ ಬೀದರ್ ಜಿಲ್ಲೆ

ಪೋಷಣ ಅಭಿಯಾನ ಯೋಜನೆಯ ಅನುಷ್ಠಾನ
Last Updated 18 ಸೆಪ್ಟೆಂಬರ್ 2020, 14:56 IST
ಅಕ್ಷರ ಗಾತ್ರ

ಬೀದರ್: ‘ರಾಜ್ಯದಲ್ಲಿ ಪೋಷಣ ಅಭಿಯಾನ ಯೋಜನೆಯ ಅನುಷ್ಠಾನಗೊಳಿಸುವಲ್ಲಿ ಬೀದರ್ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದರೆ, ಮಾತೃ ವಂದನ ಯೋಜನೆಯ ಅನುಷ್ಠಾನದಲ್ಲಿ ನಾಲ್ಕನೇ ಸ್ಥಾನ ಸ್ಥಾನದಲ್ಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಂಭುಲಿಂಗ ಹಿರೇಮಠ ಹೇಳಿದರು.

ಇಲ್ಲಿಯ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯಡಿ ಪೌಷ್ಟಿಕ ಆಹಾರ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೀದರ್‌ ಜಿಲ್ಲೆಯಲ್ಲಿ ಅಪೌಷ್ಟಿಕತೆಯ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಮಾತೃವಂದನ ಹಾಗೂ ಮಾತೃಪೂರ್ಣ ಯೋಜನೆಯನ್ನೂ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಲಾಕ್‌ಡೌನ್‌ ಅವಧಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ತಲುಪಿಸುವ ಕಾರ್ಯವನ್ನು ಮಾಡಿದ್ದಾರೆ’ ಎಂದರು.


ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಸಿಂಧೆ ಮಾತನಾಡಿ, ‘ತಾಯಂದಿರು ಹಾಗೂ ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತ ಹೀನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮೂಲಕ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಳಿವಳಿಕೆ ನೀಡಲಾಗುತ್ತಿದೆ’ ಎಂದು ಹೇಳಿದರು.

ಬೀದರ್‌ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಧನರಾಜ್‌ ಬೋರಾಳೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬ್ರಿಮ್ಸ್‌ನ ಮನೋರೋಗ ತಜ್ಞ ಡಾ.ಅಭಿಜೀತ ಪಾಟೀಲ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಗೀತಾ ಜಿ., ಬೀದರ್‌ ಗ್ರಾಮೀಣ ಠಾಣೆಯ ಎಎಸ್‌ಐ ತಸ್ಲಿಮಾ ಪಾಲ್ಗೊಂಡಿದ್ದರು. ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರ್ತಾಪೂರೆ, ದೇವೇಂದ್ರಪ್ಪ ನಾಟೆಕರ್ ಇದ್ದರು.

ಇದೇ ಸಂದರ್ಭದಲ್ಲಿ ಗರ್ಭಿಣಿಯರ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಮಹಿಳೆಯರು ಸೋಬಾನೆ ಪದ ಹಾಡಿದರು. ಬಾಲಭವನದಲ್ಲಿ ತರಕಾರಿ, ಹಣ್ಣು ಸೇರಿದಂತೆ ಪೌಷ್ಟಿಕಾಂಶಗಳು ಇರುವ ಪದಾರ್ಥಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಮೇಲ್ವಿಚಾರಕಿ ಭಾಗ್ಯವತಿ ಸ್ವಾಗತಿಸಿದರು. ಚಂದ್ರಕಲಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT