ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಲಸಿಕೆ ಜಾಗೃತಿ ಮೂಡಿಸಿದ ಉಸ್ತುವಾರಿ ಕಾರ್ಯದರ್ಶಿ

Last Updated 27 ಅಕ್ಟೋಬರ್ 2021, 15:12 IST
ಅಕ್ಷರ ಗಾತ್ರ

ಜನವಾಡ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿಚರ್ಡ್ ವಿನ್ಸೆಂಟ್ ಡಿಸೋಜಾ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಕೋವಿಡ್ ಲಸಿಕೆ ಜಾಗೃತಿ ಮೂಡಿಸಿದರು.

ಮನೆ ಮನೆಗೆ ಭೇಟಿ ಕೊಟ್ಟು, ಲಸಿಕೆ ಪಡೆಯದವರ ಮಾಹಿತಿ ಪಡೆದರು. ಇನ್ನೂ ಲಸಿಕೆ ತೆಗೆದುಕೊಳ್ಳದ ಅರ್ಹರಿಗೆ ಲಸಿಕೆ ಪಡೆಯುವಂತೆ ಮನವೊಲಿಸಿದರು. ಕೋವಿಡ್ ಕಾರಣ ವಹಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ, ಜಿಲ್ಲಾಧಿಕಾರಿ ಕಚೇರಿಯ ಸತೀಶ್ ವಾಲೆ, ಗ್ರಾಮ ಪಂಚಾಯಿತಿ ಸದಸ್ಯ ಕಾಶೀನಾಥ, ಬಳಿರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT